ಮಡಿಕೇರಿ, ಆ. 4: ಕರ್ನಾಟಕ ಪೊಲೀಸ್ ಸಶಸ್ತ್ರಪಡೆಯಲ್ಲಿ ಖಾಲಿ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ಸಂಬಂಧ ತಾ. 5 ರಂದು (ಇಂದು) ಪರೀಕ್ಷೆ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 688 ಹುದ್ದೆಗಳಿಗೆ ಆಯಾ ಜಿಲ್ಲೆಗಳಲ್ಲಿ ನೇಮಕ ಪ್ರಕ್ರಿಯೆಯು ಇಂದು ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿ ಖಾಲಿಯಿರುವ 22 ಹುದ್ದೆಗಳಿಗೆ 1933 ಮಂದಿ ಅರ್ಜಿ ಸಲ್ಲಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪಣ್ಣೇಕರ್ ತಿಳಿಸಿದ್ದಾರೆ.

ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯು ನಗರದ ವಿವಿಧ ಶಾಲಾ-ಕಾಲೇಜುಗಳಲ್ಲಿ ನಡೆಯಲಿದೆ.

ಅಭ್ಯರ್ಥಿಗಳು ಪ್ರವೇಶ/ ಹಾಜರಾತಿ ಪತ್ರವನ್ನು ಪೊಲೀಸ್ ಅಂತರ್ಜಾಲದಲ್ಲಿ ತಿತಿತಿ.ಞsಠಿ.gov.iಟಿ ಪಡೆದು ಅದರಲ್ಲಿ ನಿಗದಿ ಪಡಿಸಿರುವ ಭಾವಚಿತ್ರವಿರುವ ದಾಖಲೆ ಗಳೊಂದಿಗೆ ಪರೀಕ್ಷೆಗೆ ಹಾಜರಾಗುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪಣ್ಣೇಕರ್ ಅವರು ತಿಳಿಸಿದ್ದಾರೆ.