ಮಡಿಕೇರಿ, ಆ. 4: ಬೆಂಗಳೂರಿನ ಕೊಡಗು ಗೌಡ ಯುವ ವೇದಿಕೆ ವತಿಯಿಂದ ತಾ. 5 ರಂದು (ಇಂದು) ಸಾಂಪ್ರದಾಯಿಕ ಆಟಿಹಬ್ಬ ಏರ್ಪಡಿಸಲಾಗಿದೆ. ಬೆಂಗಳೂರಿನ ಕೊಡಗು ಗೌಡ ಸಮಾಜದ ಆವರಣದಲ್ಲಿ ಹಬ್ಬ ನಡೆಯಲಿದ್ದು, ಬೆಳಿಗ್ಗೆ 10 ಗಂಟೆಗೆ ನಾಟಿ ಮಾಡುವ ಮೂಲಕ ಚಾಲನೆ ನೀಡಲಾಗುವದು. ನಂತರ ಇಡ್ಲಿ ತಿನ್ನುವ ಸ್ಪರ್ಧೆ ನಡೆಯಲಿದೆ ಎಂದು ಯುವ ವೇದಿಕೆ ಅಧ್ಯಕ್ಷ ಕೊಂಬನ ಪ್ರವೀಣ್ ತಿಳಿಸಿದ್ದಾರೆ.