ಮಡಿಕೇರಿ, ಆ. 5: ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಪ್ರಸಕ್ತ ವರ್ಷದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಉಪ ಯೋಜನೆಯಡಿಯಲ್ಲಿ 4 ಮಂದಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ ಮತ್ತು ಹಿಂದುಳಿದ ವರ್ಗಗಳ 2 ಮಂದಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ (ಒಟ್ಟು 6 ಮಂದಿ) ಪ್ರಮುಖ ದಿನಪತ್ರಿಕೆ/ಎಲೆಕ್ಟ್ರಾನಿಕ್ ಮಾಧ್ಯಮಗಳ ಕಚೇರಿಯಲ್ಲಿ 10 ತಿಂಗಳ ಕಾಲ ತರಬೇತಿ ನೀಡಲಿದೆ. ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ತಲಾ ರೂ. 20 ಸಾವಿರಗಳ ಶಿಷ್ಯ ವೇತನ ನೀಡಲಾಗುವದು.

ಕರ್ನಾಟಕದ ಯಾವದೇ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪತ್ರಿಕೋದ್ಯಮ ಹಾಗೂ ಸಂವಹನ ಪದವಿಯಲ್ಲಿ ಅತೀ ಹೆಚ್ಚು ಅಂಕ ಪಡೆದಿರುವ 28 ವರ್ಷ ದೊಳಗಿನ ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ ಸ್ವವಿವರ, ವಿದ್ಯಾರ್ಹತೆ ಪತ್ರಗಳು, ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಛಾಯಾಚಿತ್ರಗಳನ್ನು ಸ್ಕ್ಯಾನ್ ಮಾಡಿ ಇಮೇಲ್ ವಿಳಾಸ, ದೂರವಾಣಿ ಸಂಖ್ಯೆ ಣಡಿಚಿiಟಿeeಞmಚಿ@gmಚಿiಟ.ಛಿom ಮೂಲಕ ಅಥವಾ ಅಂಚೆ ಮೂಲಕ ತಾ. 31 ರೊಳಗಾಗಿ ಕಳುಹಿಸಲು ಕೋರಿದೆ.

ಅಪೂರ್ಣ ಅರ್ಜಿಗಳನ್ನು ತಿರಸ್ಕರಿಸಲಾಗುವದು. ಈ ಹಿಂದೆ ಅರ್ಜಿ ಸಲ್ಲಿಸಲ್ಪಟ್ಟವರು ಪುನಃ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸಿದ್ದರಾಜು ತಿಳಿಸಿದ್ದಾರೆ.