ಮಡಿಕೇರಿ, ಆ. 5: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಮಡಿಕೇರಿ, ಸೋಮವಾರಪೇಟೆ ತಾಲೂಕು ಲ್ಯಾಂಪ್ಸ್, ಬಸವನಹಳ್ಳಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬಸವನಹಳ್ಳಿ ಮೊರಾರ್ಜಿ ವಸತಿ ಶಾಲೆಯ ಸಭಾಂಗಣದಲ್ಲಿ ತಾ. 7 ರಂದು ಬೆಳಿಗ್ಗೆ 11 ಗಂಟೆಗೆ ಗಿರಿಜನರ ದೊಡ್ಡ ಪ್ರಮಾಣದ ವಿವಿಧೊದ್ದೇಶ ಸಹಕಾರ ಸಂಘದ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರುಗಳಿಗೆ ಕಾಯ್ದೆ ತಿದ್ದುಪಡಿ ಹಾಗೂ ಸಂಘದ ಅಭಿವೃದ್ಧಿ ಕುರಿತು ಶಿಕ್ಷಣ ಕಾರ್ಯಕ್ರಮ ನಡೆಯಲಿದೆ.

ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಎ.ಕೆ. ಮನು ಮುತ್ತಪ್ಪ, ಕರ್ನಾಟಕ ರಾಜ್ಯ ಸಹಕಾರ ಲ್ಯಾಂಪ್ಸ್ ಮಹಾಮಂಡಳ ನಿರ್ದೇಶಕ ಎಸ್.ಎನ್. ರಾಜಾರಾವ್, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಎಸ್.ಪಿ. ನಿಂಗಪ್ಪ ಇತರರು ಪಾಲ್ಗೊಳ್ಳಲಿದ್ದಾರೆ.