ಸೋಮವಾರಪೇಟೆ, ಆ. 5: ಸುಧಾರಿತ ಕೃಷಿಯಿಂದ ಅಧಿಕ ಇಳುವರಿ ಪಡೆಯಲು ಸಾಧ್ಯ. ಕೃಷಿಕರು ಈ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಹೇಳಿದರು. ಶಾಂತಳ್ಳಿಯ ಶ್ರೀ ಕುಮಾರಲಿಂಗೇಶ್ವರ ಸಮುದಾಯ ಭವನದಲ್ಲಿ ನಡೆದ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅತಿವೃಷ್ಟಿಯಿಂದ ಬೆಳೆಗಳ ಮೇಲೆ ಪರಿಣಾಮ ಬೀರುತ್ತಿದ್ದು, ಕೃಷಿ ವಲಯಕ್ಕೆ ಸರ್ಕಾರ ವಿಶೇಷ ಯೋಜನೆಗಳನ್ನು ರೂಪಿಸಬೇಕು. ಈ ಬಾರಿಯ ಬೆಳೆಹಾನಿಗೆ ಸೂಕ್ತ ಪರಿಹಾರ ನೀಡಬೇಕೆಂದು ಹೇಳಿದರು.

ಗೋಣಿಕೊಪ್ಪ ಕೃಷಿ ಕೇಂದ್ರದ ವಿಜ್ಞಾನಿ ಡಾ. ವಿರೇಂದ್ರಕುಮಾರ್, ಚೆಟ್ಟಳ್ಳಿ ಕೇಂದ್ರೀಯ ತೋಟಗಾರಿಕಾ ಸಂಶೋಧನಾ ಕೇಂದ್ರದ ವಿಜ್ಞಾನಿ ವೆಂಕಟರಮಣಪ್ಪ, ಸಹಾಯಕ ಕೃಷಿ ನಿರ್ದೇಶಕ ಡಾ. ರಾಜಶೇಖರ್ ಕೃಷಿ ಬೆಳೆಗಳಿಗೆ ಬಾಧಿಸುವ ಕೀಟ ನಿಯಂತ್ರಣ ಕುರಿತು ಮಾಹಿತಿ ನೀಡಿದರು,

ಕಾರ್ಯಕ್ರಮದಲ್ಲಿ ಶಾಂತಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಗ್ಗನ ಅನಿಲ್‍ಕುಮಾರ್, ಜಿ.ಪಂ. ಕೃಷಿ ಮತ್ತು ಕೈಗಾರಿಕಾ ಸಮಿತಿ ಅಧ್ಯಕ್ಷೆ ಸರೋಜಮ್ಮ, ಬೆಟ್ಟದಳ್ಳಿ ಗ್ರಾ.ಪಂ. ಅಧ್ಯಕ್ಷೆ ಹೆಚ್.ಆರ್. ಪವಿತ್ರ, ತೋಳೂರುಶೆಟ್ಟಳ್ಳಿ ಗ್ರಾ.ಪಂ. ಅಧ್ಯಕ್ಷೆ ವಿ.ಜೆ. ಪಾರ್ವತಿ, ಶಾಂತಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್. ದಿನೇಶ್ ಮತ್ತಿತರರು ಉಪಸ್ಥಿತರಿದ್ದರು.