ಮೂರ್ನಾಡು, ಆ. 5: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಪಾರಾಣೆ ಪ್ರೌಢಶಾಲೆಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಶಾಲಾ ತೋಟದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು. ಯೋಜನೆಯ ಮೂರ್ನಾಡು ವಲಯ ಮೇಲ್ವಿಚಾರಕಿ ಜಯಶ್ರೀ ಪರಿಸರದ ಕುರಿತು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಶಾಲಾ ವೃತ್ತಿ ಶಿಕ್ಷಕ ಹೆಚ್.ಎಲ್. ಬೈರ, ಪಾರಾಣೆ ಒಕ್ಕೂಟದ ಅಧ್ಯಕ್ಷೆ ಗುಲಾಬಿ, ಉಪಾಧ್ಯಕ್ಷ ಬೋಪಣ್ಣ, ಪಾರಾಣೆ ಒಕ್ಕೂಟ ಸೇವಾಪ್ರತಿನಿಧಿ ಸಾವಿತ್ರಿ, ಹೊದ್ದೂರು ಬಿ ಒಕ್ಕೂಟದ ಸೇವಾಪ್ರತಿನಿಧಿ ಕಾವೇರಿ, ಸದಸ್ಯರು ಹಾಗೂ ಶಿಕ್ಷಕ ವೃಂದ ಹಾಜರಿದ್ದರು.