ಮಡಿಕೇರಿ, ಆ. 5: ಕಡಂಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಡಂಗ ಗ್ರಾಮದ ನೆಲ್ಲಚಂಡ ಕಿರಣ್ ಅವರನ್ನು ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿ ಪೋಷಕರು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭ ಮುಖ್ಯ ಶಿಕ್ಷಕರಾಗಿ ವರ್ಗಾವಣೆಗೊಂಡ ಕೆ.ಎ. ಮುದ್ದಮ್ಮ ಹಾಗೂ ಕೆ.ಜಿ. ಕನಿಕೆ ಅವರನ್ನು ಸನ್ಮಾನಿಸಿ, ಬೀಳ್ಕೊಡಲಾಯಿತು.