ಮಡಿಕೇರಿ, ಆ. 7: ರಾಜ್ಯ ಚುನಾವಣಾ ಆಯೋಗವು ಸ್ಥಳೀಯ ಸಂಸ್ಥೆಗಳಗೆ ಚುನಾವಣೆ ನಡೆಸಲು ಆದೇಶಿಸಿದೆ. ಚುನಾವಣಾ ನೀತಿ ಸಂಹಿತೆಯು ತಾ. 2 ರಿಂದ ಸೆ. 1 ರವರೆಗೆ ಜಾರಿಯಲ್ಲಿರುತ್ತದೆ. ಈ ಸಂದರ್ಭದಲ್ಲಿ ತಾ. 15ರಂದು (ಬುಧವಾರÀ) ಸ್ವಾತಂತ್ರ್ಯ ದಿನಾಚರಣೆ ಹಬ್ಬವನ್ನು ಆಚರಿಸಲು ನಿಬಂಧನೆಗಳನ್ನು ವಿಧಿಸಲಾಗಿದೆ.

ಸ್ವಾತಂತ್ರ್ಯ ದಿನಾಚರಣೆಯು ರಾಷ್ಟ್ರೀಯ ಹಬ್ಬವಾಗಿದ್ದು, ರಾಷ್ಟ್ರೀಯ ಹಬ್ಬಗಳನ್ನು ಮತ್ತು ನಾಡ ಹಬ್ಬಗಳನ್ನು ಆಚರಿಸಲು ನೀತಿ ಸಂಹಿತೆ ಅಡ್ಡಿ ಇರುವದಿಲ್ಲ ಆದರೆ, ಚುನಾವಣೆ ನಡೆಯುವ ಜಿಲ್ಲೆಗಳಲ್ಲಿ ಆಚರಣೆಯ ಸಂದರ್ಭದಲ್ಲಿ ರಾಜಕೀಯ ವ್ಯಕ್ತಿಗಳು, ಶಾಸಕರು ಹಾಗೂ ಮಂತ್ರಿಗಳು ನೀತಿ ಸಂಹಿತೆಗೆ ಬಾಧಕವಾಗುವ ರೀತಿಯಲ್ಲಿ ಪಟ್ಟಣ, ನಗರ ಪ್ರದೇಶದ ಮತದಾರರ ಮೇಲೆ ಪರಿಣಾಮ ಬೀರುವಂತಹ ಯಾವದೇ ಘೋಷಣೆ, ಹೇಳಿಕೆ ಅಥವಾ ಆಶ್ವಾಸನೆ ಇತ್ಯಾದಿಗಳನ್ನು ಮಾಡುವಂತಿಲ್ಲ. ಈ ಬಗ್ಗೆ ಸಂಬಂಧಪಟ್ಟವರಿಗೆ ಸೂಕ್ತ ಸೂಚನೆ ನೀಡುವಂತೆ ಚುನಾವಣಾ ಆಯೋಗ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.