ಕುಶಾಲನಗರ, ಆ. 7: ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಶಾಲನಗರ ಸಮೀಪದ ಚನ್ನಕೇಶವಪುರ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮಮ್ಮ (48) ಆತ್ಮಹತ್ಯೆಗೆ ಶರಣಾದವರು. ಈ ನಡುವೆ ಮೃತರ ಪತಿ ನಾಗೇಶ್ ಸೋಮವಾರ ಬೆಳಿಗ್ಗೆಯಿಂದ ನಾಪತ್ತೆಯಾಗಿರುವದಾಗಿ ಕುಟುಂಬ ಸದಸ್ಯರು ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.