ಗೋಣಿಕೊಪ್ಪಲು, ಆ. 7: ದಕ್ಷಿಣ ಕೊಡಗಿನ ಕುಟ್ಟ ಪಂಚಾಯಿತಿ ವ್ಯಾಪ್ತಿಯ ಮಂಚಳ್ಳಿ ಗ್ರಾಮದಲ್ಲಿ ಹುಲಿ ಧಾಳಿ ನಡೆದಿದ್ದು, ಹಸುವೊಂದು ಬಲಿಯಾಗಿದೆ. ಕಳೆದ ಮೂರು ದಿನಗಳ ಹಿಂದೆ ರೈತ ಮುಂಡುಮಾಡ ಅಯ್ಯಣ್ಣ ಎಂಬವರ ಹಸು ಕಾಣೆಯಾಗಿತ್ತು. ಈ ಬಗ್ಗೆ ಸಮೀಪದ ತೋಟದಲ್ಲಿ ಹುಡುಕಾಟ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಸುದ್ದಿ ತಿಳಿದ ರೈತ ಸಂಘದ ಮುಖಂಡ ಅಜ್ಜಮಾಡ ಚಂಗಪ್ಪ, ಡಿಸಿಎಫ್ ಜಯಾ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಹುಲಿ ಧಾಳಿಯ ಬಗ್ಗೆ ಮಾಹಿತಿ ಒದಗಿಸಿದರು. ಕೂಡಲೇ ಹಸು ಕಳೆದುಕೊಂಡ ಕುಟುಂಬಕ್ಕೆ ಪರಿಹಾರ ವಿತರಿಸುವಂತೆ ಮನವಿ ಮಾಡಿದರು. ಕೂಡಲೇ ಪರಿಹಾರ ಬಿಡುಗಡೆ ಮಾಡುವದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಸ್ಥಳಕ್ಕೆ ಶ್ರೀಮಂಗಲ ವಲಯ ಅಧಿಕಾರಿ ವೀರೆಂದ್ರ ಹಾಗೂ ಸಿಬ್ಬಂದಿ ತೆರಳಿ ಮಹಜರು ನಡೆಸಿದರು.