ಮಡಿಕೇರಿ, ಆ. 7: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ವಕೀಲರ ಸಂಘ ಇವರ ಜಂಟಿ ಆಶ್ರಯದಲ್ಲಿ ಸಂತ್ರಸ್ಥರ ಪರಿಹಾರ ಯೋಜನೆ 2011ರ ಬಗ್ಗೆ ಕಾನೂನು ಶಿಬಿರ ತಾ. 8 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ನ್ಯಾಯಾಲಯದ ಆವರಣದಲ್ಲಿ ನಡೆಯಲಿದೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ವೀರಪ್ಪ ವೀರಭದ್ರಪ್ಪ ಮಲ್ಲಾಪುರ, ವಕೀಲರ ಸಂಘದ ಅಧ್ಯಕ್ಷ ಕೆ.ಎಸ್. ಕವನ್, ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ. ಪವನೇಶ್, ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯಕುಮಾರ್, ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸಾ ಇತರರು ಪಾಲ್ಗೊಳ್ಳಲಿದ್ದಾರೆ.