ಮಡಿಕೇರಿ, ಆ. 7: ಮಡಿಕೇರಿಯ ವಿದ್ಯಾನಗರದಲ್ಲಿ ನಿರ್ಮಾಣಗೊಂಡಿರುವ ನ್ಯಾಯಾಲಯ ಕಟ್ಟಡದ ಆವರಣದಲ್ಲಿ ವಕೀಲರ ಭವನ ನಿರ್ಮಾಣಕ್ಕೆ 4.70 ಕೋಟಿ ರೂಪಾಯಿ ಬಿಡುಗಡೆಗೊಂಡಿದೆ.ವಕೀಲರ ಸಂಘದ ಅಧ್ಯಕ್ಷ ಕೆ.ಎಸ್. ಪವÀನ್, ಕಾರ್ಯದರ್ಶಿ ಡಿ.ಜಿ. ಕಿಶೋರ್ ಹಾಗೂ ಸಮಿತಿ ಸದಸ್ಯರ ನಿಯೋಗ ಉಚ್ಚ ನ್ಯಾಯಾಲಯದ ರಿಜಿಸ್ಟ್ರಾರ್ ಜನರಲ್ ಅವರಿಗೆ ಮನವಿ ಸಲ್ಲಿಸಿತ್ತು. ಈ ಬಗ್ಗೆ ಸ್ಪಂದಿಸಿದ ಅವರು ಹಣ ಬಿಡುಗಡೆಗೊಂಡಿದ್ದು, ಕಟ್ಟಡ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಸೂಚಿಸಿದ್ದಾರೆ.ಈ ಬಗ್ಗೆ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ ರಿಜಿಸ್ಟ್ರಾರ್ ರಾಮಚಂದ್ರ ಡಿ. ಹುದ್ದಾರ್ ಅವರು ಪತ್ರ ಬರೆದಿದ್ದು, ಅಂದಾಜು ಪಟ್ಟಿ ತಯಾರಿಸುವಂತೆ ಕೋರಿದ್ದಾರೆ.