ಗುಡ್ಡೆಹೊಸೂರು, ಆ. 7: ಇಲ್ಲಿನ ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ 5 ವರ್ಷದ ಅವಧಿಗೆ ತಾ. 18 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸಂಘದ ಕಚೇರಿಯಲ್ಲಿ ಚುನಾವಣೆ ನಡೆಯಲಿದೆ ಎಂದು ಸಹಕಾರ ಸಂಘದ ಉಪನಿಬಂಧಕರು ತಿಳಿಸಿದ್ದಾರೆ.
ಸಂಘದ ಸದಸ್ಯರು ತಮ್ಮ ಇತ್ತೀಚಿನ 2 ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ ಸಲ್ಲಿಸಿ ಸಂಘದ ಕಾರ್ಯದರ್ಶಿಯಿಂದ ಭಾವಚಿತ್ರವಿರುವ ಗುರುತಿನ ಚೀಟಿಯನ್ನು ಪಡೆಯಲು ಸೂಚಿಸಿದ್ದಾರೆ. ತಪ್ಪಿದಲ್ಲಿ ಚುನಾವಣೆಗೆ ಸ್ಪರ್ಧಿಸಲು ಮತ್ತು ಮತದಾನ ಮಾಡಲು ಅವಕಾಶ ಇರುವದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಂಘದ ಕಾರ್ಯದರ್ಶಿ ಅವರನ್ನು (9008737637) ಸಂಪರ್ಕಿಸಲು ಕೋರಲಾಗಿದೆ.