ಮಡಿಕೇರಿ, ಆ. 9: ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಕ್ವಿಟ್ ಇಂಡಿಯಾ ಚಳುವಳಿ ಮಹತ್ವದ ಪಾತ್ರ ವಹಿಸಿತ್ತು ಎಂದು ಕೆಪಿಸಿಸಿ ಹಿರಿಯ ಪದಾಧಿಕಾರಿ ಟಿ.ಪಿ. ರಮೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.

ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜರುಗಿದ 76ನೇ ಕ್ವಿಟ್ ಇಂಡಿಯಾ ಚಳುವಳಿಯ ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕ ತೆನ್ನಿರ ಮೈನಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ಡಿಸಿಸಿ ಉಪಾಧ್ಯಕ್ಷ ಹನೀಫ್, ನಗರ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ರಜಾಕ್, ವೃತ್ತಿಪರ ಘಟಕದ ಅಧ್ಯಕ್ಷ ಅಂಬೆಕಲ್ ನವೀನ್, ನಗರ ಮಹಿಳಾ ಅಧ್ಯಕ್ಷೆ ಪಾರ್ವತಿ ಫ್ಯಾನ್ಸಿ, ಸಾಮಾಜಿಕ ಜಾಲತಾಣ ನಗರಾಧ್ಯಕ್ಷ ಚಂದ್ರಶೇಖರ್, ನಗರಸಭಾ ಸದಸ್ಯೆ ತಜಸ್ಸುಂ, ಡಿಸಿಸಿ ಸದಸ್ಯರಾದ ಪುಷ್ಪ ಪೂಣಚ್ಚ, ವಿ.ಆರ್. ರಾಣಿ, ಎಸ್.ವಿ. ಉಷಾ ಸೇರಿದಂತೆ ಕಾರ್ಯಕರ್ತರು ಹಾಜರಿದ್ದರು.