ನಾಪೆÇೀಕ್ಲು, ಆ. 9: ನಗರದಿಂದ ಕೊಡವ ಸಮಾಜದ ರಸ್ತೆಗಾಗಿ ಹಾದುಹೋಗುವ ಅಜ್ಜಿಮುಟ್ಟ ಪ್ರಾಥಮಿಕ ಶಾಲೆವರೆಗಿನ ರಸ್ತೆಗೆ ಸುಮಾರು ರೂ. 20 ಲಕ್ಷ ಅನುದಾನ ಮಂಜೂರಾಗಿದ್ದು, ಕೂಡಲೇ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಜಿಲ್ಲಾ ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರರಿಗೆ ಸೂಚಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ತಿಳಿಸಿದರು.
ನಾಪೆÇೀಕ್ಲು ಕೊಡವ ಸಮಾಜದ ಅಜ್ಜಿಮುಟ್ಟ ರಸ್ತೆಯನ್ನು ಪರಿಶೀಲಿಸಿದ ನಂತರ ಮಾತನಾಡಿದ ಅವರು ಈ ರಸ್ತೆಯ ಬಗ್ಗೆ ಸಾರ್ವಜನಿಕರು ಹಲವಾರು ಬಾರಿ ಮನವಿ ಸಲ್ಲಿಸಿದ್ದಾರೆ. ಅದಕ್ಕೆ ಪೂರಕವಾಗಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ನೀಡಿದ ಪ್ಯಾಕೇಜ್ನಲ್ಲಿ ಈ ರಸ್ತೆಯ ದುರಸ್ತಿಗೆ ಸುಮಾರು 20 ಲಕ್ಷ ರೂ. ಗಳನ್ನು ಮಂಜೂರು ಮಾಡಿದ್ದು, ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ಕೂಡಲೇ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.
ಈ ಸಂದರ್ಭ ತಲಕಾವೇರಿ ಭಾಗಮಂಡಲ ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ಬಿದ್ದಾಟಂಡ ಎಸ್. ತಮ್ಮಯ್ಯ, ಕೊಡವ ಸಮಾಜದ ಪ್ರಧಾನ ಕಾರ್ಯದರ್ಶಿ ಮಂಡೀರ ರಾಜಪ್ಪ, ಖಜಾಂಚಿ ಅಪ್ಪಾರಂಡ ಸುಧೀರ್ ಅಯ್ಯಪ್ಪ, ಕಾರ್ಯದರ್ಶಿ ಕನ್ನಂಬಿರ ಸುಧಿ ತಿಮ್ಮಯ್ಯ, ಆರ್.ಎಂ.ಸಿ. ಸದಸ್ಯೆ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ, ಗ್ರಾ.ಪಂ. ಉಪಾಧ್ಯಕ್ಷ ಸಾಬಾ ತಿಮ್ಮಯ್ಯ, ಗ್ರಾ.ಪಂ. ಮಾಜಿ ಅಧ್ಯಕ್ಷ ಕುಲ್ಲೇಟಿರ ಅರುಣ್ ಬೇಬ, ಗ್ರಾ.ಪಂ. ಸದಸ್ಯೆ ಪುಲ್ಲೆರ ಪದ್ಮಿನಿ, ಕೊಡವ ಸಮಾಜದ ಸದಸ್ಯ ಚೋಕಿರ ಸಜಿತ್, ಮತ್ತಿತರರು ಹಾಜರಿದ್ದರು.