ಕೂಡಿಗೆ, ಆ. 10 : ಶಿರಂಗಾಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ನೂತನ ಗ್ರಂಥಾಲಯ, ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ತಾ. 11ರಂದು (ಇಂದು) ನಡೆಯಲಿದೆ.
ನೂತನ ಗ್ರಂಥಾಲಯವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ. ಕೆಂಚಪ್ಪ ಉದ್ಘಾಟಿಸಲಿದ್ದು, ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆಯನ್ನು ಕುಶಾಲನಗರ ಡಿವೈಎಸ್‍ಪಿ ಪಿ.ಕೆ. ಮುರುಳೀಧರ್ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕವನ್ನು ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಫಿಲಿಪ್‍ವಾಸ್ ಅವರು ಉದ್ಘಾಟಿಸಲಿದ್ದಾರೆ.
ಕಾಲೇಜಿನ ಪ್ರಾಂಶುಪಾಲ ಎಂ.ಆರ್. ಸುರೇಶ್‍ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕೃಷಿ ಮತ್ತು ಕೈಗಾರಿಕ ಸ್ಥಾಯಿ ಸಮಿತಿಯ ಅಧ್ಯಕ್ಷ ಹೆಚ್.ಆರ್. ಶ್ರೀನಿವಾಸ್, ತಾ.ಪಂ. ಸದಸ್ಯ ಎನ್.ಎಸ್. ಜಯಣ್ಣ, ಶಿರಂಗಾಲ ಗ್ರಾ.ಪಂ. ಅಧ್ಯಕ್ಷ ಎನ್.ಎಸ್. ರಮೇಶ್, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಎನ್.ಬಿ. ಮಹೇಶ್, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಸೋಮಯ್ಯ, ದೇವತಾ ಸಮಿತಿಯ ಅಧ್ಯಕ್ಷ ಎಸ್.ಎಸ್. ಚಂದ್ರಶೇಖರ್ ಮತ್ತು ಕಾರ್ಯದರ್ಶಿ ಸಿ.ಎನ್. ಲೋಕೇಶ್ ಆಗಮಿಸಲಿದ್ದಾರೆ ಎಂದು ಕಾಲೇಜಿನ ಉಪನ್ಯಾಸಕ ಹಂಡ್ರಂಗಿ ನಾಗರಾಜ್ ತಿಳಿಸಿದ್ದಾರೆ.