ಸೋಮವಾರಪೇಟೆ, ಆ. 10: ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಇಲ್ಲಿನ ತಾಲೂಕು ಕಚೇರಿಯಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆ ತಹಶೀಲ್ದಾರ್ ಮಹೇಶ್ ಅಧ್ಯಕ್ಷತೆಯಲ್ಲಿ ನಡೆಯಿತು.
ತಾ. 10 ರಂದು ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳು, ಅಂಗನವಾಡಿ ಕೇಂದ್ರ, ಕಾಲೇಜು ಗಳಲ್ಲಿ 1 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಸುರಕ್ಷತೆ ಮತ್ತು ಪರಿಣಾಮಕಾರಿಯಾದ ಜಂತು ಹುಳು ನಿವಾರಣಾ ಮಾತ್ರೆ ನೀಡಲಾ ಗುವದು. ಎಲ್ಲ ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳ ಬೇಕೆಂದು ತಹಶೀಲ್ದಾರ್ ಮನವಿ ಮಾಡಿದರು.
ತಾಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ಮಾತನಾಡಿ, ಮಿಶನ್ ಇಂದ್ರ ಧನುಷ್ ಲಸಿಕಾ ಅಭಿಯಾನದಡಿಯಲ್ಲಿ ಗರ್ಭಿಣಿ ಯರು, 2 ವರ್ಷದೊಳಗಿನ ಮಕ್ಕಳು ಮತ್ತು 5 ರಿಂದ 6 ವರ್ಷದೊಳಗಿನ ಮಕ್ಕಳು ಈ ಅಭಿಯಾನದಡಿಯಲ್ಲಿ ಲಸಿಕೆ ಪಡೆಯಲಿದ್ದಾರೆ. ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಈ ಲಸಿಕೆ ನೀಡಲಾಗು ವದು. ಕೊಡಗು ಜಿಲ್ಲಾದ್ಯಂತ ಈ ಕಾರ್ಯಕ್ರಮ ನಡೆಯಲಿದ್ದು, ವಿವಿಧ ಇಲಾಖೆಗಳ ಸಹಕಾರ ಅಗತ್ಯವಿದೆ ಎಂದರು.
ಸಾರ್ವಜನಿಕರು ಈ ಅಭಿಯಾನದ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಹೇಳಿದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಪ್ರಭಾರ ಕಾರ್ಯ ನಿರ್ವಹಣಾಧಿಕಾರಿ ಸುನಿಲ್, ರೋಟರಿ ಸಂಸ್ಥೆ ಅಧ್ಯಕ್ಷ ಪಿ.ಕೆ.ರವಿ, ಲಯನ್ಸ್ ಸಂಸ್ಥೆ ಅಧ್ಯಕ್ಷ ಯೋಗೇಶ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಹೆಚ್.ಕೆ.ಶಾಂತಿ ಹಾಗೂ ಕಿರಿಯ ಆರೋಗ್ಯ ಸಹಾಯಕ ಮಹೇಶ್ ಉಪಸ್ಥಿತರಿದ್ದರು.