ಕೂಡಿಗೆ, ಆ. 10: ಕೂಡಿಗೆ ಬಿ.ಜೆ.ಪಿ. ಶಕ್ತಿ ಕೇಂದ್ರದ ವತಿಯಿಂದ ಮಹಿಳಾ ಮೋರ್ಚಾದ ಶಕ್ತಿ ಕೇಂದ್ರದ ಸಭೆ ಟೃನಿ ಚೆನ್ಡ್ ಪ್ರೀ ಸ್ಕೂಲ್ ಆವರಣದಲ್ಲಿ ನಡೆಯಿತು.ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಮಾತನಾಡಿ, ಮಹಿಳೆಯರು ಸಬಲೀಕರಣಗೊಳ್ಳುವದರ ಜೊತೆಯಲ್ಲಿ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಜನಪರ ಯೋಜನೆಯ ಕಾರ್ಯಕ್ರಮಗಳನ್ನು ಬಳಸಿಕೊಳ್ಳಬೇಕು ಎಂದರು. ಈ ಸಂದರ್ಭ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಯಮುನಾ ಚಂಗಪ್ಪ ಮಾತನಾಡಿ, ಮಹಿಳೆಯರು ಸಂಘಟನಾ ಮನೋಭಾವದಿಂದ ದುಡಿಯಬೇಕು ಎಂದರು.

ಸಭೆಯ ಅಧ್ಯಕ್ಷತೆಯನ್ನು ಕೂಡಿಗೆಯ ಬಿ.ಜೆ.ಪಿ. ಶಕ್ತಿ ಕೇಂದ್ರದ ಅಧ್ಯಕ್ಷೆ ಸಾವಿತ್ರಿ ರಾಜು ವಹಿಸಿದ್ದರು. ವೇದಿಕೆಯಲ್ಲಿ ಸೋಮವಾರಪೇಟೆ ತಾಲೂಕು ಬಿ.ಜೆ.ಪಿ. ಮಹಿಳಾ ಮೋರ್ಚಾದ ಅಧ್ಯಕ್ಷೆ ನಳಿನಿ ಗಣೇಶ್, ಕಾರ್ಯಕಾರಿ ಸದಸ್ಯೆ ಸುಮಾ ಸುದೀಪ್, ತಾಲೂಕು ಪ್ರಧಾನ ಕಾರ್ಯದರ್ಶಿ ತಂಗಮ್ಮ, ಜಿಲ್ಲಾ ಉಪಾಧ್ಯಕ್ಷೆ ಉಷಾ ತೇಜಶ್ವಿನಿ, ಪ್ರಧಾನ ಕಾರ್ಯದರ್ಶಿ ಕನಕ ಮೊದಲಾದವರು ಇದ್ದರು.