ಚೆಯ್ಯಂಡಾಣೆ, ಆ. 10: ಚೆಯ್ಯಂಡಾಣೆಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶೂ ಹಾಗೂ ಸಾಕ್ಸ್ ವಿತರಣಾ ಕಾರ್ಯಕ್ರಮ ನಡೆಸಲಾಯಿತು.
ಈ ಸಂದರ್ಭ ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ ಅವರನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು, ಮುಖ್ಯ ಶಿಕ್ಷಕರು ಮತ್ತು ಶಾಲಾ ಶಿಕ್ಷಕ ವೃಂದದವರು ಸನ್ಮಾನಿಸಿದರು.
ತಾಲೂಕು ಪಂಚಾಯಿತಿ ಸದಸ್ಯೆ ಉಮಾಪ್ರಭು, ಗ್ರಾಮ ಪಂಚಾಯಿತಿ ಸದಸ್ಯ ಬೆಳಿಯಂಡ್ರ ರತೀಶ್ ಕುಮಾರ್, ಎಸ್.ಡಿ.ಎಂ.ಸಿ. ಅಧ್ಯಕ್ಷರು ಹಾಜರಿದ್ದರು.