ಕುಶಾಲನಗರ, ಆ. 10: ಕುಶಾಲನಗರ ಕೊಪ್ಪ ಗ್ರಾಮದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಜಯಂತಿ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜಾ ವಿಧಿಗಳು ನೆರವೇರಿಸಲಾಯಿತು.

ಈ ಸಂದರ್ಭ ದೇವಿಯ ಉತ್ಸವ ಮೂರ್ತಿಯನ್ನು ಅಲಂಕೃತ ವಾಹನದಲ್ಲಿ ಪ್ರತಿಷ್ಠಾಪಿಸಿ ವಾದ್ಯಗೋಷ್ಠಿಗಳೊಂದಿಗೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು.