ನಾಪೆÇೀಕ್ಲು, ಆ. 11: ನಾಪೆÇೀಕ್ಲು – ಅಜ್ಜಿಮುಟ್ಟ – ಎಮ್ಮೆಮಾಡು ಸಂಪರ್ಕ ರಸ್ತೆಗೆ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ 3.65 ಕೋಟಿ ರೂ. ವೆಚ್ಚದಲ್ಲಿ ಕ್ರಿಯಾ ಯೋಜನೆ ತಯಾರಿಸಲಾಗಿದೆ ಎಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಮಾಹಿತಿ ನೀಡಿದರು.
ನಾಪೆÇೀಕ್ಲು ಕೊಡವ ಸಮಾಜದಲ್ಲಿ ಈ ಬಗ್ಗೆ ಸಾರ್ವಜನಿಕರೊಂದಿಗೆ ಮಾತನಾಡಿದರು. ಈ ಸಂದರ್ಭದಲ್ಲಿ ನಾಪೆÇೀಕ್ಲು ಕೊಡವ ಸಮಾಜದ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ, ಪಕ್ಷದ ಮುಖಂಡರಾದ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಬಿದ್ದಂಡ ಉಷಾ ದೇವಮ್ಮ, ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಅಪ್ಪಾರಂಡ ಸುಧೀರ್ ಅಯ್ಯಪ್ಪ, ಬೊಪ್ಪಂಡ ಡಾ|| ಜಾಲಿ ಬೋಪಯ್ಯ ಮತ್ತಿತರರು ಇದ್ದರು.