ಗೋಣಿಕೊಪ್ಪ ವರದಿ, ಆ. 11: ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿ ರುವ ಘಟನೆ ಅಮ್ಮತ್ತಿಯಲ್ಲಿ ನಡೆದಿದೆ. ವೀರಾಜಪೇಟೆ ಕಾವೇರಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪುಷ್ಪಾ (17) ಆತ್ಮಹತ್ಯೆ ಮಾಡಿಕೊಂಡಿ ರುವ ವಿದ್ಯಾರ್ಥಿನಿ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಶನಿವಾರ ಮನೆಗೆ ಬಂದ ಪುಷ್ಪಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನನ್ನ ಆತ್ಮಹತ್ಯೆಗೆ ಯಾರೋ ಕಾರಣರಾಗಿ ದ್ದಾರೆ. ಅದನ್ನು ತಿಳಿಸುವದಿಲ್ಲ ಎಂದು ಪತ್ರದಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.