ಗುಡ್ಡೆಹೊಸೂರು, ಆ. 11: ಇಲ್ಲಿಗೆ ಸಮೀಪದ ಆನೆಕಾಡು ಬಳಿ ಮಧ್ಯಪ್ರದೇಶದಿಂದ ಪ್ರವಾಸಕ್ಕೆ ಆಗಮಿಸಿದ (ಕೆ.ಎ. 01 3262) ಟಿಟಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ನಡೆದಿದ್ದು, ವಾಹನದಲ್ಲಿದ್ದ 12 ಮಂದಿಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕುಶಾಲನಗರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.