ಸುಂಟಿಕೊಪ್ಪ, ಆ. 11: ಗ್ರಾಮೀಣ ನೈರ್ಮಲ್ಯವನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಮಂತ್ರಾಲಯವು ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ ಯೋಜನೆ ಯಡಿ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಗ್ರೇಡ್ 1) ವತಿಯಿಂದ ಆಗಸ್ಟ್ ತಿಂಗಳಿನಲ್ಲಿ ಕೈಗೊಂಡಿರುವ ಸ್ವಚ್ಛ ಸರ್ವೇಶಿಕ್ಷಣ ಗ್ರಾಮೀಣ -2018 ರ ಕಾರ್ಯಕ್ರಮದ ರೂಪುರೇಷೆ ಹಾಗೂ ಕಾರ್ಯಕ್ರಮ ವನ್ನು ಅವಿಷ್ಕಾರಗೊಳಿಸುವ ಕುರಿತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಜೆ. ಮೇದಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆ ನಡೆಸಲಾಯಿತು.
ವಿವಿಧ ಶಾಲಾ-ಕಾಲೇಜಿನ ಮುಖ್ಯಸ್ಥರು ಹಾಗೂ ಸಂಘ ಸಂಸ್ಥೆಗಳ ಪ್ರಮುಖರ ಸಭೆಯಲ್ಲಿ ಗ್ರಾಮದ ಸ್ವಚ್ಛತೆ ಶುಚಿತ್ವ ಹಾಗೂ ನೈರ್ಮಲ್ಯದ ಮಹತ್ವದ ಬಗ್ಗೆ ಸಮುದಾಯದಲ್ಲಿ ಆರಿವು ಮೂಡಿಸಲು ಎಲ್ಲರೂಸಹಕರಿಸಬೇಕು ಎಂದು ಪಿಡಿಓ ಮೇದಪ್ಪ ಮನವಿ ಮಾಡಿದರು.
ಸರ್ವಶಿಕ್ಷಣ ಕಾರ್ಯಕ್ರಮದಡಿ ಸಾರ್ವಜನಿಕ ಸ್ಥಳಗಳಲ್ಲಿ ನೈರ್ಮಲ್ಯ ಸ್ವಚ್ಛತೆ ಮತ್ತು ಉತ್ತಮ ಪರಿಸರ ಕಾಪಾಡುವದು ಎಲ್ಲಾ ನಾಗರಿಕರ ಕರ್ತವ್ಯವಾಗಿದೆ. ಈ ಅಭಿಯಾನದಲ್ಲಿ ನಾಗರಿಕರು ಸಕ್ರಿಯವಾಗಿ ಪಾಲ್ಗೊಂಡು ಸ್ವಚ್ಛ ಗ್ರಾಮ ರೂಪಿಸಲು ಸಹಕರಿಸಬೇಕೆಂದು ಅವರು ಹೇಳಿದರು.
ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಟಿ.ಜಿ. ಪ್ರೇಮ್ಕುಮಾರ್ ಸ್ವಚ್ಛ ಗ್ರಾಮ ಸ್ವಚ್ಛ ಭಾರತ್ ಅಭಿಯಾನದ ಕುರಿತು ಮಾತನಾಡಿ ಗ್ರಾಮದ ಬೀದಿ, ಕುಡಿಯುವ ನೀರಿನ ಸಂಗ್ರಹ ಮಾರುಕಟ್ಟೆ, ಆಸ್ಪತ್ರೆ, ಅಂಗನವಾಡಿ, ಶಾಲೆ,ಧಾರ್ಮಿಕ ಕೇಂದ್ರಗಳು ಸೇರಿದಂತೆ ಸಾರ್ವಜನಿಕ ಸ್ಥಳ ಹಾಗೂ ಶೌಚಾಲಯಗಳನ್ನು ಸುಸ್ಥಿಯಲ್ಲಿಟ್ಟು ಸ್ವಚ್ಛತೆ ಕಾಪಾಡುವದು ಎಲ್ಲರ ಕರ್ತವ್ಯವಾಗಿದೆ. ಈ ಅಭಿಯಾನ ಯಶಸ್ವಿಗೆ ಸಂಘಟಿತ ಪ್ರಯತ್ನ ಅಗತ್ಯ ಎಂದರು.
ತಾ.ಪಂ. ಸಹಾಯಕ ಅಭಿಯಂತರ ಫಯಾಜ್ ಆಹ್ಮದ್ ಮಾತನಾಡಿ, ಗ್ರಾ.ಪಂ. ಸ್ವಚ್ಛತೆಗೆ ಆಧ್ಯತೆ ನೀಡುವ ಮೂಲಕ ಸ್ವಚ್ಛ ಭಾರತ ಅಭಿಯಾನ ಯಶಸ್ವಿಗೆ ಎಲ್ಲರೂ ಸಹಕರಿಸಬೇಕೆಂದರು. ಸಭೆಯಲ್ಲಿ ಗ್ರಾಮದಲ್ಲಿ ಸ್ವಚ್ಛತೆಗೆ ಸಂಬಂಧಿಸಿದಂತೆ ಪ್ರಚಾರದ ಧ್ವನಿ ಮುದ್ರಣ ಸ್ವಚ್ಛತೆ ಗೀತೆ, ಸ್ವಚ್ಛ ತೆ ಘೋಷಣೆ ಮತ್ತಿತರ ಜನಜಾಗೃತಿ ಮೂಲಕ ಗ್ರಾಮವನ್ನು ಸ್ವಚ್ಛ ಗ್ರಾಮವನ್ನಾಗಿ ರೂಪಿಸಲು ಜನಪ್ರತಿನಿಧಿಗಳು ವಿವಿಧ ಇಲಾಖೆಯ ಮುಖ್ಯಸ್ಥರು, ಶಾಲಾ-ಕಾಲೇಜುಗಳು ಸಂಘ ಸಂಸ್ಥೆಗಳ ಹಾಗೂ ನಾಗರಿಕರ ಸಹಭಾಗಿತ್ವ ಪಡೆಯುವ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಪಂಚಾಯಿತಿ ಕಾರ್ಯದರ್ಶಿ ಶ್ರೀಧರ್, ಸಹಕಾರ ಸಂಘದ ಕಾರ್ಯದರ್ಶಿ ಪ್ರತಾಪ್, ಕಾಲೇಜಿನ ಪ್ರಾಂಶುಪಾಲ ಪಿ.ಎಸ್. ಜಾನ್, ಶಾಲಾ ಸೀಕ್ಷಕರು ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಇದ್ದರು.