ಮಡಿಕೇರಿ, ಆ. 12: ಕೊಡಗು ಜಿಲ್ಲೆಯ ವಿವಿಧ ಶೈಕ್ಷಣಿಕ ಸಂಸ್ಥೆಗಳಲ್ಲಿ ಆಯೋಜಿಸಿದ್ದ ಕಾರ್ಯಕ್ರಮಗಳ ವಿವಿರ ಈ ಕೆಳಗಿನಂತಿದೆ.

ಮಡಿಕೇರಿ: ಭಾರತೀಯ ವಿದ್ಯಾಭವನ, ಕೊಡಗು ವಿದ್ಯಾಲಯದ ವತಿಯಿಂದ ಏರ್ಪಡಿಸಲಾಗಿದ್ದ ಅಂತರ ಶಾಲಾ ಚದುರಂಗ ಸ್ಪರ್ಧೆಯಲ್ಲಿ ಮಡಿಕೇರಿಯ ಸಂತ ಜೋಸೆಫರ ಪ್ರೌಢಶಾಲೆಯ ವಿದ್ಯಾರ್ಥಿನಿ ಸಹೋದರಿಯರು ಸಾಧನೆ ತೋರಿದ್ದಾರೆ.

ಪ್ರೌಢಶಾಲಾ ವಿಭಾಗದಲ್ಲಿ ಕೊಲ್ಯದ ಸದ್ವಿನಿ ಗಿರೀಶ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ಪ್ರಾಥಮಿಕ ವಿಭಾಗದಲ್ಲಿ ಸಹೋದರಿ ಸಾನ್ನಿಧ್ಯ ಗಿರೀಶ್ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ.

ಇವರಿಬ್ಬರು ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಕೊಲ್ಯದ ಗಿರೀಶ್ ಹಾಗೂ ಸುಷ್ಮಾ ದಂಪತಿಯರ ಪುತ್ರಿಯರು. ಸ್ಪರ್ಧೆಯಲ್ಲಿ ಒಟ್ಟು 98 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುಂಟಿಕೊಪ್ಪ,ಆ.10: ಅಂಗನವಾಡಿ ಕಾರ್ಯಕರ್ತೆಯಾರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿಗೊಂಡ ಕಾರ್ಯಕರ್ತೆಯರಿಗೆ ಸುಂಟಿಕೊಪ್ಪ ಹೋಬಳಿ ಅಂಗನವಾಡಿ ಕಾರ್ಯಕರ್ತೆಯರು ಸನ್ಮಾನಿಸಿ ಬೀಳ್ಕೊಡುಗೆ ನೀಡಿದರು. ಸುಂಟಿಕೊಪ್ಪ ಪಂಪ್‍ಹೌಸ್ ಅಂಗನವಾಡಿ ಕೇಂದ್ರದಲ್ಲಿ ಹೋಬಳಿ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸೋಮವಾರಪೇಟೆ ತಾಲೂಕಿನ ಸಿಐಟಿಯುನ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿರ ಸಂಘಟನೆಯ ತಾಲೂಕು ಕಾರ್ಯದರ್ಶಿ ಎಸ್.ಎನ್.ಸಾವಿತ್ರಿ ಮಾತನಾಡಿದರು.

ಗದ್ದೆಹಳ್ಳದ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದ ಪಿ.ಕೆ. ದಮಯಂತಿ ಹಾಗೂ ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂದಗೋವೆ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆಸಲ್ಲಿಸುತ್ತಿದ್ದ ಎಂ.ಎನ್. ವನಜಾಕ್ಷಿ ಅವರುಗಳು ಸೇವೆಯಿಂದ ವಯೋನಿವೃತ್ತಿಗೊಂಡಿದ್ದು ಅವರುಗಳನ್ನು ಬೀಳ್ಕೊಡಲಾಯಿತು.

ಈ ಸಂದರ್ಭದಲ್ಲಿ ಹಿರಿಯ ಕಾರ್ಯಕರ್ತೆಯರಾದ ಜೇಸಿ ಡಿಸೋಜ, ಮಂಜುಳ,ಲೀಲಾವತಿ, ಸೇರಿದಂತೆ ವಿವಿಧ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು, ಸಹಾಯಕಿಯರು ಉಪಸ್ಥಿತರಿದ್ದರು.

ಮೂರ್ನಾಡು: ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನಲ್ಲಿ ನಾಯಕತ್ವ ತರಬೇತಿ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಎರಡು ದಿನಗಳಿಂದ ಅಂತರರ್ರಾಷ್ಟ್ರೀಯ ಮುಂಬೈನ ತರಬೇತುದಾರ ಸಚಿನ್ ಕಾಮತ್ ಹಾಗೂ ಕ್ಲಾರಿಸಾ ಜತನ್ನ ಯಶಸ್ವಿಯಾಗಿ ತರಬೇತಿ ಶಿಬಿರವನ್ನು ನಡೆಸಿಕೊಟ್ಟರು.

ಸಮಾರೋಪ ಸಮಾರಂಭದಲ್ಲಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಪುದಿಯೋಕ್ಕಡ ಸುಬ್ರಮಣಿ ಮತ್ತೋರ್ವ ಅತಿಥಿ ಬಡುವಂಡ ಪೂಣಚ್ಚ ಮಾತನಾಡಿದರು. ತರಬೇತುದಾರ ಕ್ಲಾರಿಸಾ ಜತನ್ನ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ.ಪಟ್ಟಡ ಪೂವಣ್ಣ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ನಿರ್ದೇಶಕರುಗಳಾದ ನಂದೇಟಿರ ರಾಜಾ ಮಾದಪ್ಪ, ಪೆಮ್ಮುಡಿಯಂಡ ವೇಣು ಅಪ್ಪಣ್ಣ ಹಾಗೂ ಕಾಲೇಜಿನ ಎಲ್ಲಾ ಉಪನ್ಯಾಸಕ ವರ್ಗದವರು ಹಾಜರಿದ್ದರು.

ವಿದ್ಯಾರ್ಥಿನಿಯರಾದ ಅಮೃತ ಮತ್ತು ನಮೃತ ಪ್ರಾರ್ಥಿಸಿ ಉಪನ್ಯಾಸಕ ಹರ್ಷ ಮಂದಣ್ಣ ನಿರೂಪಿಸಿ, ಹರೀಶ್ ಕಿಗ್ಗಾಲು ಸ್ವಾಗತಿಸಿ, ನವೀನ್ ಎನ್.ಸಿ. ವಂದಿಸಿದರು.

ಕುಶಾಲನಗರ: ಕುಶಾಲನಗರ ವಾಸವಿ ಯುವತಿಯರ ಸಂಘದ ವತಿಯಿಂದ ಸುಂಟಿಕೊಪ್ಪ ಹೋಬಳಿಯ ಮತ್ತಿಕಾಡು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ನಡೆಯಿತು.

ಯುವತಿಯರ ಸಂಘದ ಅಧ್ಯಕೆÀ್ಷ ಕುಸುಮ ಸುಖೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರಕಾರಿ ಪ್ರಾಥಮಿಕ ಶಾಲೆಯ 65 ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಲಾಯಿತು.

ಈ ಸಂದರ್ಭ ಮಾತನಾಡಿದ ಸಂಘದ ಪ್ರಮುಖರಾದ ದಿವ್ಯ ಸುಜಯ್, ಮೂಲಭೂತ ಸೌಲಭ್ಯಗಳ ಕೊರತೆ ಎದುರಿಸುತ್ತಿರುವ ಸರಕಾರಿ ಶಾಲೆಗಳ ಬಗ್ಗೆ ಸಂಘಸಂಸ್ಥೆಗಳು ಗಮನಹರಿಸಬೇಕಿದೆ. ಕುಗ್ರಾಮಗಳಲ್ಲಿರುವ ಶಾಲೆಗಳ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾಗಿ ಸಹಾಯಹಸ್ತ ಚಾಚಬೇಕಿದೆ ಎಂದರು.

ಈ ಸಂದರ್ಭ ಸಂಘದ ಉಪಾಧ್ಯಕ್ಷರುಗಳಾದ ಲಕ್ಷ್ಮಿ ಹರೀಶ್, ಶ್ರೀಲಕ್ಷ್ಮಿ ರವಿಚಂದ್ರ, ಶಾಲಾ ಮುಖ್ಯ ಶಿಕ್ಷಕಿ ಕುಸುಮಾ, ಶಿಕ್ಷಕರಾದ ಅನುಷಾ, ವಿನು ಮತ್ತಿತರರು ಇದ್ದರು.

ಸೋಮವಾರಪೇಟೆ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಪ್ರೌಢÀಶಾಲಾ ವಿದ್ಯಾರ್ಥಿಗಳಿಗೆ ವಚನ ಗಾಯನ (ಕಂಠಪಾಠ) ಸ್ಪರ್ಧೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಮಹೇಶ್ ತಿಳಿಸಿದ್ದಾರೆ.

“ವಚನ ದಿನ”ದ ಅಂಗವಾಗಿ ಜಿಲ್ಲೆಯ ಪ್ರೌಢÀಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದಲ್ಲಿ ವಚನ ಗಾಯನ (ಕಂಠಪಾಠ) ಸ್ಪರ್ಧೆ ನಡೆಸಲಾಗುತ್ತಿದೆ. ಮಡಿಕೇರಿ ತಾಲೂಕಿನ ವಿದ್ಯಾರ್ಥಿಗಳಿಗೆ ತಾ. 24 ರಂದು ಬೆಳಿಗ್ಗೆ 10.30ಕ್ಕೆ ಕೊಡಗು ಪ್ರೆಸ್ ಕ್ಲಬ್ ಸಹಯೋಗದಲ್ಲಿ ಮಡಿಕೇರಿಯ ಪತ್ರಿಕಾ ಭವನದಲ್ಲಿ ಸ್ಪರ್ಧೆ ನಡೆಯಲಿದೆ. ತಾ. 30 ರಂದು ವೀರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ಸಹಯೋಗದಲ್ಲಿ ವೀರಾಜಪೇಟೆ ತಾಲೂಕಿನ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 10.30ಕ್ಕೆ ಗೋಣಿಕೊಪ್ಪದ ಎ.ಪಿ.ಎಂ.ಸಿ. ಸಭಾಂಗಣದಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ.

ಸೋಮವಾರಪೇಟೆ ತಾಲೂಕಿನ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 4 ರಂದು ಬೆಳಿಗ್ಗೆ 10.30ಕ್ಕೆ ಸೋಮವಾರಪೇಟೆ ತಾಲೂಕಿನ ಪತ್ರಕರ್ತರ ಸಂಘದ ಸಹಯೋಗದಲ್ಲಿ ಪಟ್ಟಣದ ಸಂತ ಜೋಸೆಫರ ಪ್ರೌಢÀಶಾಲೆಯ ಸಭಾಂಗಣದಲ್ಲಿ ಸ್ಪರ್ಧೆ ನಡೆಯಲಿದೆ. ಪ್ರತಿ ಪ್ರೌಢಶಾಲೆಯಿಂದ ಇಬ್ಬರು ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದಾಗಿದ್ದು ಪ್ರಥಮ, ದ್ವಿತೀಯ, ತೃತೀಯ ಸ್ಥಾನಗಳಿಸಿದ ವಿದ್ಯಾರ್ಥಿಗಳಿಗೆ ನಗದು ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವದು ಎಂದು ಮಹೇಶ್ ತಿಳಿಸಿದ್ದಾರೆ.ವೀರಾಜಪೇಟೆ: ವೀರಾಜಪೇಟೆ ಬಳಿಯ ಕುಟ್ಟಂದಿ ವರ್ತುಲದ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಕಡಕೊಲ್ಲಿ ಮಾಚವ್ವ ಅವರಿಗೆ ನಾಂಗಾಲ ಗ್ರಾಮದ ಅಂಗನವಾಡಿ ಸಭಾಂಗಣದಲ್ಲಿ ಶಾಲು ಹೊದಿಸಿ ಸನ್ಮಾನಿಸಿಸಲಾಯಿತು.

ಇದೇ ಸಂದರ್ಭದಲ್ಲಿ ಅಂಗನವಾಡಿ ಹಿರಿಯ ಕಾರ್ಯಕರ್ತೆ ಹಾಗೂ ಅಥ್ಲೆಟಿಕ್ ಎನ್.ಕೆ. ಸೀತಮ್ಮ, ಇತರ ಕಾರ್ಯಕರ್ತರು ಹಾಜರಿದ್ದರು.

ಮಡಿಕೇರಿ: ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆಯ ಮಹತ್ವದ ಕುರಿತು ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಸಭಾ ಕಾರ್ಯಕ್ರಮಕ್ಕೆ ಮೊದಲು ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆಯ ಬಗೆಗಿನ ಘೋಷಣೆಗಳನ್ನು ಒಳಗೊಂಡ ಜಾಥಾವನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಪರಿಸರ ಅಧಿಕಾರಿ, ಬಿ.ಆರ್. ಗಣೇಶನ್, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೊಡಗು ಜಿಲ್ಲೆ ಇವರು ಪರಿಸರದ ಮೇಲೆ ಆಗುತ್ತಿರುವ ಮಾಲಿನ್ಯಗಳ ಬಗ್ಗೆ ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಅರ್ಥಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಮಹೇಶ್ ಕೆ.ಕೆ. ಅವರು ಪರಿಸರವನ್ನು ರಕ್ಷಿಸುವಲ್ಲಿ ಯುವ ಜನರ ಪಾತ್ರದ ಕುರಿತು ತಿಳಿಸಿದರು. ವೇದಿಕೆಯಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿಗಳಾದ ಹಾಗೂ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ನಿರ್ಮಲಾ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ರಾಷ್ಟ್ರೀಯ ಸೇವಾ ಯೋಜನಾ ಗೀತೆಯೊಂದಿಗೆ ಆರಂಭಿಸಲಾಯಿತು. ಅರ್ಪಿತಾ ಕಾರ್ಯಕ್ರಮ ನಿರೂಪಿಸಿ, ತಶ್ಮಿತಾ ಸ್ವಾಗತಿಸಿ, ರಕ್ಷಿತಾ ವಂದಿಸಿದರು.

ಕೂಡಿಗೆ: ಮಡಿಕೇರಿ ಸಾಮಾಜಿಕ ಅರಣ್ಯ ವಿಭಾಗ ಹಾಗೂ ಸೋಮವಾರಪೇಟೆ ಸಾಮಾಜಿಕ ಅರಣ್ಯ ವಲಯದ ವತಿಯಿಂದ ಕೂಡುಮಂಗಳೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಕೋ ಕ್ಲಬ್ ಆಶ್ರಯದಲ್ಲಿ ಪರಿಸರ ಜಾಗೃತಿ ಆಂದೋಲನ ಹಾಗೂ ವನಮಹೋತ್ಸವ ಆಚರಿಸಲಾಯಿತು.

ವಿಜ್ಞಾನ ಪರಿಷತ್ ಜಿಲ್ಲಾ ಸಂಚಾಲಕ ಟಿ.ಜಿ. ಪ್ರೇಮ್‍ಕುಮಾರ್ ಮಾತನಾಡಿ, ಪ್ರತಿಯಿಬ್ಬರೂ ತಮ್ಮ ಪರಿಸರದಲ್ಲಿ ಹೆಚ್ಚೆಚ್ಚು ಗಿಡ-ಮರಗಳನ್ನು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕು ಎಂದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿ ರವಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪುಟ್ಟಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ್, ವೀರಪ್ಪ, ಶಾಲಾ ಮುಖ್ಯ ಶಿಕ್ಷಕಿ ರುಕ್ಮಿಣಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಗೋಣಿಕೊಪ್ಪ ವರದಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಗೋಣಿಕೊಪ್ಪ ಲಯನ್ಸ್ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಗೋಣಿಕೊಪ್ಪ ಲಯನ್ಸ್ ಕ್ಲಬ್ ಸಹಯೋಗದಲ್ಲಿ ವೀರಾಜಪೇಟೆ ತಾಲೂಕು ಮಟ್ಟದ ಭಾಷಣ ಹಾಗೂ ದೇಶ ಭಕ್ತಿ ಗೀತೆ ಸ್ಪರ್ಧೆಯಲ್ಲಿ ಗೋಣಿಕೊಪ್ಪ ಕಾಲ್ಸ್ ಶಾಲಾ ತಂಡ ಹೆಚ್ಚು ಪ್ರಶಸ್ತಿ ಗಿಟ್ಟಿಸಿಕೊಂಡಿದೆ.

ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಸ್ಥಳೀಯ ವಿದ್ಯಾ ಸಂಸ್ಥೆಗಳಿಂದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇಂಗ್ಲೀಷ್ ಭಾಷಣ ಸ್ಪರ್ಧೆಯ 1-5 ನೇ ತರಗತಿ ವಿಭಾಗದಲ್ಲಿ ಕಾಪ್ಸ್ ಶಾಲೆಯ ಕೃತಿನ್ ಮಿತಿ, ಕಾಲ್ಸ್ ಶಾಲೆಯ ತ್ರಿಶಾ ಸೋಮಯ್ಯ, ಲಯನ್ಸ್ ಶಾಲೆಯ ಪ್ರಾಪ್ತಿ ಪೊನ್ನಮ್ಮ, ಕನ್ನಡ ವಿಭಾಗದಲ್ಲಿ ಕಾಪ್ಸ್‍ನ ಎನ್.ಕೆ. ಟೀನಾ, ಕಾಪ್ಸ್‍ನ ಕೆ.ಕೆ. ಆಧ್ಯಾ, ಲಯನ್ಸ್‍ನ ದೃವ್ ನಾಣಯ್ಯ, 5 ರಿಂದ 7ನೇ ತರಗತಿ ವಿಭಾಗದಲ್ಲಿ ಕಾಲ್ಸ್‍ನ ಶಾಶ್ವತ್ ಕುಶಾಲಪ್ಪ, ಕಾಲ್ಸ್‍ನ ಆಲಿಯಾ ಚೋಂದಮ್ಮ, ಲಯನ್ಸ್‍ನ ಬಿಜಿಲಿ ಮುತ್ತಮ್ಮ, ಕನ್ನಡ ವಿಭಾಗದಲ್ಲಿ ಕಾಲ್ಸ್‍ನ ಆರ್. ಗೆಹಾನ್, ಕಾಲ್ಸ್‍ನ ಸಾನಾ ಪೂವಯ್ಯ, ಸಾಯಿಶಂಕರ್‍ನ ವೈ. ಎಂ. ಕಾವೇರಿ ಇವರುಗಳು ಸಮವಾಗಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಪಡೆದುಕೊಂಡರು ಮತ್ತು ಲಯನ್ಸ್‍ನ ನಿಖಿತಾ ಚೋಂದಮ್ಮ (ತೃ), ಲಯನ್ಸ್‍ನ ಕಾಂಚನ್ ಕಮಲಾಕ್ಷಿ ಪ್ರೋತ್ಸಾಹಕರ ಬಹುಮಾನ ಪಡೆದುಕೊಂಡರು.

ದೇಶಭಕ್ತಿ ಗೀತೆ: ದೇಶಭಕ್ತಿ ಗೀತೆಯ ಎಲ್.ಕೆಜಿಯಿಂದ ಯುಕೆಜಿ ವಿಭಾಗದಲ್ಲಿ ಬೇಂಬಿನೋದ ಅಧ್ವಿತಾ, ಬೇಂಬಿನೋದ ಅನ್ಸಿ ಅಚ್ಚಪ್ಪ, ಲಯನ್ಸ್‍ನ ಎ.ಎಸ್. ಇಶಾನಿ ಹಾಗೂ ಕಾಪ್ಸ್‍ನ ಅದೆಲೆನೆ ರಚೆಲ್ ಸುಲೊಕೆ (ತೃ.)

1-5ನೇ ತರಗತಿ ವಿಭಾಗದಲ್ಲಿ ಲಯನ್ಸ್‍ನ ಲಕ್ಷಣ್ ಚೆಂಗಪ್ಪ ಹಾಗೂ ಸರ್ವಧೈವತಾದ ಗೆನ್ಷಮ್ ಶರ್ಮ (ಪ್ರ), ಕಾಲ್ಸ್‍ನ ಸಾನ್ವಿ (ದ್ವಿ), ಲಯನ್ಸ್‍ನ ಪ್ರಾಪ್ತಿ ಪೊನ್ನಮ್ಮ ಹಾಗೂ ಅಪ್ಪಚ್ಚಕವಿಯ ಪಿ.ವೈ, ವಂದನ (ತೃ). 5-7ನೇ ತರಗತಿ ವಿಭಾಗದಲ್ಲಿ ಕಾಪ್ಸ್‍ನ ಅಸ್ನವ್ ಅಪ್ಪಣ್ಣ, ಕಾಪ್ಸ್‍ನ ಅನಿಕಾ ನಾಣಯ್ಯ, ಅಪ್ಪಚ್ಚಕವಿಯ ಬಿ.ಎಸ್. ಕೀರ್ತಿ ಹಾಗೂ ಸೆಂಟ್ ಆನ್ಸ್‍ನ ಸುಗುಣ (ತೃ).

ಕಾಲೇಜು ವಿಭಾಗಕ್ಕೆ ನಡೆದ ಕಥೆ ಹೇಳುವ ಸ್ಪರ್ಧೆಯ ಇಂಗ್ಲೀಷ್ ವಿಭಾಗದಲ್ಲಿ ಹಳ್ಳಿಗಟ್ಟು ಸಿಐಟಿ ಕಾಲೇಜಿನ ಸೂರಜ್ ಪೊನ್ನಣ್ಣ ಪ್ರಥಮ, ಕಾಲ್ಸ್‍ನ ಗ್ರಂಥ ಕಾವೇರಮ್ಮ ದ್ವಿತೀಯ, ಹಳ್ಳಿಗಟ್ಟು ಸಿಐಟಿ ಕಾಲೇಜಿನ ಎಂ.ಪಿ. ಕಾವೇರಮ್ಮ ತೃತೀಯ, ಕನ್ನಡ ವಿಭಾಗದಲ್ಲಿ ಕೂರ್ಗ್ ಪಿಯು ಕಾಲೇಜಿನ ಬಿ.ಆರ್. ಶರಣ್ ಫ್ರಥಮ, ಗೋಣಿಕೊಪ್ಪ ಕಾವೇರಿ ಕಾಲೇಜುವಿನ ಎಸ್. ಪಲ್ಲವಿ ದ್ವಿತೀಯ, ಶ್ರೀಮಂಗಲ ಪಿಯು ಕಾಲೇಜಿನ ಆರಾಧನ ಶರ್ಮ ಹಾಗೂ ಲಯನ್ಸ್ ಕಾಲೇಜಿನ ಮುತ್ತಮ್ಮ ತೃತೀಯ ಸ್ಥಾನ ಪಡೆದುಕೊಂಡರು.ಮಡಿಕೇರಿ: ಶಿಕ್ಷಣದಿಂದ ದೊರಕುವ ಜ್ಞಾನ ಬದುಕಿನುದ್ದಕ್ಕೂ ನಮ್ಮನ್ನು ಕಾಯುತ್ತದೆ. ಇಂತಹ ಶಿಕ್ಷಣವನ್ನು ವಿದ್ಯಾರ್ಥಿಗಳು ಪಡೆದುಕೊಂಡು ಸತ್ಪ್ರಜೆಗಳಾಗಿ ರೂಪುಗೊಳ್ಳುವಂತೆ ದಾನಿಗಳಾದ ಕೆ.ಟಿ. ಬೇಬಿ ಮ್ಯಾಥ್ಯು ಹೇಳಿದರು.

ನಗರದ ಮೈಸೂರು ರಸ್ತೆಯ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಮಕ್ಕಳಿಗಾಗಿ ‘ಕಿಂದರಿ ಜೋಗಿ’ ಸಂಚಿಕೆ ವಿತರಿಸಿ ಮಾತನಾಡಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ನಗೀನ ಮಾತನಾಡಿ, ದಾನಿಗಳಿಂದ ಶಿಕ್ಷಣಕ್ಕೆ ಪೂರಕವಾಗಿ ದೊರಕುವ ಸೌಲಭ್ಯಗಳನ್ನು ಮಕ್ಕಳು ಬಳಸಿಕೊಂಡು, ತಮ್ಮ ಬದುಕನ್ನು ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಪತ್ರಕರ್ತ ಎಸ್.ಜಿ. ಉಮೇಶ್, ಹಾಗೂ ಟಿ.ಕೆ. ಸಂತೋಷ್ ಉಪಸ್ಥಿತರಿದ್ದರು.

ಚೆಟ್ಟಳ್ಳಿ: ಕೊಡಗು ಜಿಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ವತಿಯಿಂದ ಚೆಟ್ಟಳ್ಳಿ ಪ್ರೌಢಶಾಲೆಯಲ್ಲಿ ಮೂವತ್ತು ವರ್ಷಗಳ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪೂಳಂಡ ಮಾಚಯ್ಯ ಅವರನ್ನು ಮಡಿಕೇರಿಯ ಸೇಂಟ್ ಮೈಕಲ್ ಕಾನ್ವೆಂಟ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭ ಪೆರಾಜೆ ಶಾಲೆಯ ದೈಹಿಕ ಶಿಕ್ಷಕ ದೊಡ್ಡಯ್ಯ ಅರಮೇಲು ಬರೆದ ಲಗೋರಿ ಪುಸ್ತಕವನ್ನು ಡಿಡಿಪಿಐ ಮಂಜುಳ ಬಿಡುಗಡೆಗೊಳಿಸಿದರು.

ಗೋಣಿಕೊಪ್ಪಲು: ಇಲ್ಲಿನ ಕಾವೇರಿ ಕಾಲೇಜು ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ಪುಚ್ಚಿಮಾಡ ದಿ. ತಿಮ್ಮಯ್ಯ, ದಿ. ಚೋಂದಮ್ಮ ಹಾಗೂ ದಿ. ಮೀನಾ ಸುಬ್ಬಯ್ಯ ಜ್ಞಾಪಕಾರ್ಥ ಪದವಿಪೂರ್ವ ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಕನ್ನಡ ಹಾಗೂ ಆಂಗ್ಲ ಭಾಷೆಯಲ್ಲಿ ನಡೆದ ಭಾಷಣ ಸ್ಪರ್ಧೆಯಲ್ಲಿ ಜಿಲ್ಲೆಯ 20 ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿ ಹೆಚ್.ಎನ್. ದರ್ಶನ್ ಪ್ರಥಮ ಹಾಗೂ ಅರವತೊಕ್ಲು ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಎಸ್.ಎಂ. ಪೊನ್ನಮ್ಮ ದ್ವಿತೀಯ ಸ್ಥಾನ ಪಡೆದುಕೊಂಡರು. ಆಂಗ್ಲ ಭಾಷೆಯ ಭಾಷಣ ಸ್ಪರ್ಧೆಯಲ್ಲಿ ವೀರಾಜಪೇಟೆಯ ಸಂತ ಅನ್ನಮ್ಮ ಕಾಲೇಜಿನ ವಿದ್ಯಾರ್ಥಿನಿ ಪಿ.ಕೆ. ರಿಯಾ ಪ್ರಥಮ ಹಾಗೂ ಹಳ್ಳಿಗಟ್ಟು ಸಿಐಟಿ ಕಾಲೇಜಿನ ಗ್ರೀಷ್ಮಾ ಗಂಗಮ್ಮ ದ್ವಿತೀಯ ಸ್ಥಾನ ಪಡೆದುಕೊಂಡರು. ಪ್ರಥಮ ಸಮಗ್ರ ಪ್ರಶಸ್ತಿಯನ್ನು ಅರ್ವತೊಕ್ಲು ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನ ಎಸ್.ಎಂ. ಪೊನ್ನಮ್ಮ ಮತ್ತು ಡಿ.ಟಿ. ಪೊನ್ನಮ್ಮ ಪಡೆದುಕೊಂಡರೆ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ದರ್ಶನ್ ಮತ್ತು ಅಜಿತೇಶ್ ಜೋಡಿ ಪಡೆದುಕೊಂಡಿತು.

ಈ ಸಂಧರ್ಭ ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ, ರಂಗಕರ್ಮಿ ಅಡ್ಡಂಡ ಕಾರ್ಯಪ್ಪ, ಮಾಜಿ ರಾಷ್ಟ್ರೀಯ ಬಾಸ್ಕೆಟ್ ಬಾಲ್ ಆಟಗಾರ ಕೆ.ಬಿ. ರವಿ ದೇವಯ್ಯ ಹಾಗೂ ಬೆಂಗಳೂರಿನ ಎಂ.ಎಸ್. ರಾಮಯ್ಯ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಪ್ರೊ. ಮಲ್ಚಿರ ಆಶಾ ಅವರನ್ನು ಸನ್ಮಾನಿಸಲಾಯಿತು. ಕಾವೇರಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಡಾ. ಎ.ಸಿ. ಗಣಪತಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಡೀನ್ ಡಾ. ಸಿ.ಜಿ. ಕುಶಾಲಪ್ಪ ಭಾಗವಹಿಸಿದ್ದರು.

ಈ ಸಂದರ್ಭ ಕಾವೇರಿ ಕಾಲೇಜು ಪ್ರಾಂಶುಪಾಲೆ ಹಾಗೂ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಎಸ್.ಆರ್. ಉಷಾಲತಾ, ಹಳೇ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಪ್ರೊ. ಟಿ.ಎಂ. ದೇವಯ್ಯ, ಕಾರ್ಯದರ್ಶಿ ವಾಣಿ ಚಂಗಪ್ಪ, ಪಿ.ಟಿ. ಲಾಲಾ ಪೂಣಚ್ಚ, ಪಿ.ಟಿ. ಸುಭಾಷ್ ಸುಬ್ಬಯ್ಯ, ಪಿ.ಟಿ. ಅಶೋಕ್ ಚಂಗಪ್ಪ, ಸಂಘದ ಸಂಚಾಲಕಿ ಎಸ್.ಎಂ. ರಜನಿ ಹಾಗೂ ಕಾರ್ಯಕ್ರಮ ಸಂಚಾಲಕಿ ಪಿ.ಪಿ. ಸವಿತ ಉಪಸ್ಥಿತರಿದ್ದರು. ತೀರ್ಪುಗಾರರಾಗಿ ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಪ್ರಭಾಕರ್, ನಿವೃತ್ತ ಬ್ಯಾಂಕ್ ಅಧಿಕಾರಿ ಅಚ್ಚಯ್ಯ, ನಿವೃತ್ತ ಉಪನ್ಯಾಸಕಿ ಅನಿತ ಗಣಪತಿ ಕಾರ್ಯ ನಿರ್ವಹಿಸಿದರು.

ಸೋಮವಾರಪೇಟೆ: ಸೋಮವಾರಪೇಟೆ ಪುಷ್ಪಗಿರಿ ಜೇಸೀ ಸಂಸ್ಥೆಯ ವತಿಯಿಂದ ಇಲ್ಲಿನ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಯುವ ಸಬಲೀಕರಣ ತರಬೇತಿ ಕಾರ್ಯಾಗಾರ ನಡೆಯಿತು.

ರಾಷ್ಟ್ರೀಯ ಜೇಸೀಸ್‍ನ ಉಪಾಧ್ಯಕ್ಷ ನವೀನ್ ಮಿಸ್ಕತ್ ಮತ್ತು ವಲಯ ಉಪಾಧ್ಯಕ್ಷೆ ಸಮತ ಮಿಸ್ಕತ್ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಯುವ ಸಬಲೀಕರಣದ ಬಗ್ಗೆ ಮಾಹಿತಿ ಒದಗಿಸಿದರು.

ಕಾರ್ಯಕ್ರಮದಲ್ಲಿ ಜೇಸೀ ಸಂಸ್ಥೆಯ ಅಧ್ಯಕ್ಷ ಕೆ.ಎ. ಪ್ರಕಾಶ್, ಕಾರ್ಯದರ್ಶಿ ಎಂ.ಎ. ರುಬೀನಾ, ಮಹಿಳಾ ಘಟಕದ ಅಧ್ಯಕ್ಷೆ ಮಹೇಶ್ವರಿ ಗಿರೀಶ್, ಜೇಸೀ ಸಂಸ್ಥೆಯ ಮಮತ, ಶಾಲಾ ಮುಖ್ಯೋಪಾಧ್ಯಾಯ ಹ್ಯಾರಿ ಮೋರಸ್ ಸೇರಿದಂತೆ ಸದಸ್ಯರು ಭಾವಹಿಸಿದ್ದರು.ಸೋಮವಾರಪೇಟೆ: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಇಲ್ಲಿನ ಓ.ಎಲ್.ವಿ. ಆಂಗ್ಲ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಾಲೆಯ ವಿದ್ಯಾರ್ಥಿಗಳು ಲಘು ಸಂಗೀತ, ಛದ್ಮವೇಷ, ಚಿತ್ರಕಲೆ, ಅಭಿನಯ ಗೀತೆ, ಕ್ಲೇ ಮಾಡಲಿಂಗ್, ಭಕ್ತಿ ಗೀತೆ, ರಸಪ್ರಶ್ನೆ ಸ್ಪರ್ಧೆಯಲ್ಲಿ ಮುಂದಿನ ಹಂತಕ್ಕೆ ಪ್ರವೇಶ ಪಡೆದಿದ್ದಾರೆ.

ಸಾರ್ವಜನಿಕ ಶಿಕ್ಷಣಾ ಇಲಾಖೆ ವತಿಯಿಂದ ನಡೆದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಇಲ್ಲಿನ ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಶನಿವಾರಸಂತೆ: ಇಲ್ಲಿನ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ಚಿಣ್ಣರು 72ನೇ ಸ್ವಾತಂತ್ರ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಫ್ಯಾನ್ಸಿಡ್ರೆಸ್ ಸ್ಪರ್ಧೆಯಲ್ಲಿ ಹುರುಪುನಿಂದ ಭಾಗವಹಿಸಿದ್ದರು. ಚಿಣ್ಣರು ಬಗೆಬಗೆಯ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಸಂಭ್ರಮಪಟ್ಟರು.

ಒಡೆಯನಪುರ: ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಯ ಜೊತೆಯಲ್ಲಿ ಸಾಂಸ್ಕøತಿಕ ಕಲಾ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ ಎಂದು ಜಿ.ಪಂ. ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ಸರೋಜಮ್ಮ ಅಭಿಪ್ರಾಯಪಟ್ಟರು.

ಗೋಪಾಲಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಹಂಡ್ಲಿ ಕ್ಲಸ್ಟರ್ ಮಟ್ಟದ ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮಾತನಾಡಿದರು. ತಾ.ಪಂ. ಸದಸ್ಯೆ ಲೀಲಾವತಿ ಮಹೇಶ್ ಮಾತನಾಡಿ, ವಿದ್ಯಾರ್ಥಿಗಳು ಸಾಂಸ್ಕøತಿಕ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಅಂಜಿಕೆ, ಅಳುಕು ಮುಂತಾದ ಕೀಳರೆಮೆ ಸ್ವಭಾವ ದೂರವಾಗುತ್ತದೆ ಎಂದು ಸಲಹೆ ನೀಡಿದರು.

ಹಂಡ್ಲಿ ಕ್ಲಸ್ಟರ್ ಸಿಆರ್‍ಪಿ ಮಧುಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಎಸ್‍ಡಿಎಂಸಿ ಅಧ್ಯಕ್ಷೆ ನಾಗವೇಣಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಿಡ್ತ ಗ್ರಾ.ಪಂ. ಸದಸ್ಯೆ ಸಾವಿತ್ರಮ್ಮ, ಶಾಲಾ ಮುಖ್ಯ ಶಿಕ್ಷಕ ಟಿ.ಕೆ. ಅಪ್ಪಸ್ವಾಮಿ, ಪ್ರಮುಖರಾದ ಡಿ.ಬಿ. ಸೋಮಪ್ಪ, ಸಿ.ಎಲ್. ಸುಬ್ಬಯ್ಯ, ಚಂದ್ರಶೇಖರ್, ದೇವರಾಜ್, ರಮೇಶ್, ಸಂಜೀವ್ ಚೆಟ್ಟಿಯಾರ್ ಮುಂತಾದವರಿದ್ದರು. ಕಲೋತ್ಸವ ಕಾರ್ಯಕ್ರಮದಲ್ಲಿ ಸುಮಾರು 200 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಸೋಮವಾರಪೇಟೆ: ಗೌಡಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಗೌಡಳ್ಳಿ ಸರ ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಜಿ.ಪಂ. ಸದಸ್ಯ ಬಿ.ಜೆ. ದೀಪಕ್ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಮಕ್ಕಳ ಪ್ರತಿಭೆಗಳನ್ನು ಹೊರತರಲು ಇಂತಹ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಎಂದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೃಷ್ಣಯ್ಯ ಅಧ್ಯಕ್ಷತೆ ವಹಿಸಿದ್ದರು. ಇಸಿಓ �?