ಸೋಮವಾರಪೇಟೆ, ಆ. 12: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ತಹಶೀಲ್ದಾರ್ ಮಹೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ 9.30ಕ್ಕೆ ತಹಶೀಲ್ದಾರ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ.
ಶಾಸಕ ಅಪ್ಪಚ್ಚು ರಂಜನ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾಥಮಿಕ, ಪ್ರೌಢಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಸ್ಪರ್ಧೆ ಏರ್ಪಡಿಸುವದು ಹಾಗೂ ದೇಶಸೇವೆ ಮತ್ತು ಸಮಾಜಸೇವೆ ವಿಭಾಗದಲ್ಲಿ ಇಬ್ಬರನ್ನು ಸನ್ಮಾನಿಸಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ತಾ.ಪಂ. ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್, ಸಮಿತಿ ಸದಸ್ಯರಾದ ಎಸ್. ಮಹೇಶ್, ಜಯಪ್ಪ ಹಾನಗಲ್, ಎಸ್.ಡಿ. ವಿಜೇತ ಮತ್ತು ವಿವಿಧ ಇಲಾಖಾ ಧಿಕಾರಿಗಳು ಉಪಸ್ಥಿತರಿದ್ದರು.