ಮಡಿಕೇರಿ, ಆ. 12: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೊಡಗು ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯು ತಾ. 13 ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ಟೇಬಲ್ ಟೆನ್ನಿಸ್ ಪಂದ್ಯಾವಳಿಯು 14 ವರ್ಷಕ್ಕೆ ಒಳಪಟ್ಟ ಬಾಲಕ, ಬಾಲಕಿಯರಿಗೆ ಹಾಗೂ 18 ವರ್ಷ ಒಳಪಟ್ಟ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಸಿಂಗಲ್ಸ್ ಮತ್ತು ಡಬಲ್ಸ್ ಟೇಬಲ್ ಟೆನ್ನಿಸ್ ಪಂದ್ಯಾವಳಿ ಆಯೋಜಿಸಲಾಗಿದೆ. ಟೇಬಲ್ ಟೆನ್ನಿಸ್ ಆಟಗಾರರು ಟಿ.ಟಿ. ಬ್ಯಾಟ್ನ್ನು ತರತಕ್ಕದ್ದು ಹಾಗೂ ಭಾಗವಹಿಸುವ ಕ್ರೀಡಾಪಟುಗಳಿಗೆ ಯಾವದೇ ರೀತಿಯ ಪ್ರವೇಶ ಶುಲ್ಕ ಇರುವದಿಲ್ಲ. ಈ ಪಂದ್ಯಾವಳಿಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಹೆಚ್ಚಿನ ಮಾಹಿತಿಗೆ ದೂ.ಸಂ: 08272-228985 ನ್ನು ಸಂಪರ್ಕಿಸಬಹುದು.