ಸೋಮವಾರಪೇಟೆ, ಆ. 12: ಶಾಂತಳ್ಳಿ ಸಮೂಹ ಸಂಪನ್ಮೂಲ ಕೇಂದ್ರದ ವತಿಯಿಂದ ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳ ವಿದ್ಯಾರ್ಥಿಗಳಿಗೆ ಸಮೀಪದ ಬೆಟ್ಟದಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಿಭಾಗೀಯ ಉಪಾಧ್ಯಕ್ಷ ಸಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಅಧ್ಯಕ್ಷತೆ ವಹಿಸಿದ್ದರು. ಬೆಟ್ಟದಳ್ಳಿ ಸಹಿಪ್ರಾ ಶಾಲಾ ಮುಖ್ಯೋಪಾಧ್ಯಾಯ ಪಿ.ಎಸ್. ವೆಂಕಟೇಶ್, ತೋಳೂರುಶೆಟ್ಟಳ್ಳಿ ಶಾಲೆಯ ಚಂದ್ರಮ್ಮ, ಗೋಣಿಮರೂರು ಕ್ಲಸ್ಟರ್‍ನ ಸಿಆರ್‍ಪಿ ಡಿ.ಎಂ. ಚಿಣ್ಣಪ್ಪ, ಶಾಂತಳ್ಳಿ ಕ್ಲಸ್ಟರ್‍ನ ಸಮೂಹ ಸಂಪನ್ಮೂಲ ವ್ಯಕ್ತಿ ಶಿವಲಿಂಗ, ತೋಳೂರುಶೆಟ್ಟಳ್ಳಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಿವಪ್ಪ ಅವರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಾಂತಳ್ಳಿ ಕ್ಲಸ್ಟರ್ ವ್ಯಾಪ್ತಿಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಭಾಗವಹಿಸಿ, ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು.