ಗೋಣಿಕೊಪ್ಪ ವರದಿ, ಆ. 13: ತಟ್ಟೆಕೆರೆ ಹಾಡಿಯಿಂದ ಗಿರಿಜನರ ಸ್ಥಳಾಂತರಿಸಲು ಅರಣ್ಯ ಇಲಾಖೆ ಮುಂದಾಗಿರುವದನ್ನು ಕೈಬಿಡಬೇಕು ಎಂದು ಒತ್ತಾಯಿಸಿ ತಟ್ಟೆಕೆರೆ ಹಾಡಿ ನಿವಾಸಿಗಳು ನಿಟ್ಟೂರು ಗ್ರಾಮ ಪಂಚಾಯ್ತಿ ಎದುರು ನಡೆಸುತ್ತಿದ್ದ ಧರಣಿಯನ್ನು ಹಿಂಪಡೆದಿದ್ದಾರೆ.

ಗ್ರಾಮ ಪಂಚಾಯಿತಿ ಅರಣ್ಯ ಇಲಾಖೆ, ಪೊಲೀಸ್ ಇಲಾಖೆ ಸಮ್ಮುಖದಲ್ಲಿ ನಡೆದ ಸಂಧಾನದಲ್ಲಿ ಸೆ.25ರೊಳಗೆ ತಟ್ಟಕೆರೆ ಹಾಡಿಯಲ್ಲಿ ಜಿಲ್ಲಾಧಿಕಾರಿಗಳು ಸಭೆ ನಡೆಸುವ ಭರವಸೆ ದೊರೆತ ಹಿನ್ನೆಲೆಯಲ್ಲಿ ಧರಣಿಯನ್ನು ಹಿಂತೆಗೆದು ಕೊಳ್ಳಲಾಯಿತು.