ಕೂಡಿಗೆ, ಆ. 13: ಜಿಲ್ಲೆಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಕೂಡಿಗೆಯಲ್ಲಿ ಜಿಲ್ಲಾ ಮಟ್ಟದ ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ ಬೃಹತ್ ಪಂಜಿನ ಮೆರವಣಿಗೆ ತಾ. 14 ರಂದು (ಇಂದು) ಸಂಜೆ ನಡೆಯಲಿದೆ.

ಮೆರವಣಿಗೆಯು ಕೂಡಮಂಗಳೂರು ಗ್ರಾಮ ದೊಡ್ಡಮ್ಮತಾಯಿ ದೇವಾಲಯದ ಆವರಣದಿಂದ ಹೊರಟು ಕೂಡಿಗೆಯ ಪ್ರಮುಖ ಬೀದಿಗಳಿಂದ ಸಾಗಿ ಕೂಡಿಗೆಯ ಡಯಟ್ ಮೈದಾನದಲ್ಲಿ ಅಂತ್ಯವಾಗಲಿದೆ. ನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್‍ಕುಮಾರ್ ಹೆಗ್ಗಡೆ ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾಕತ್ತೂರು ಗ್ರಾಮದ ರಾಷ್ಟ್ರಪತಿ ಸ್ವರ್ಣ ಪದಕ ಪಡೆದ ಮೇಜರ್ ಬಿದ್ದಂಡ ನಂಜಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉದ್ಯಮಿ ಉಮಾಶಂಕರ್ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮವು ಕೂಡಿಗೆಯ ಶಿಕ್ಷಕರ ತರಬೇತಿ ಕೇಂದ್ರದ ಮೈದಾನದಲ್ಲಿ ನಡೆಯಲಿದೆ ಎಂದು ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ತಿಳಿಸಿದ್ದಾರೆ.