ಮಡಿಕೇರಿ, ಆ. 13: ಕೊಡಗು ಜಿಲ್ಲಾಡಳಿತ ವತಿಯಿಂದ 72 ನೇ ಸ್ವಾತಂತ್ರ್ಯ ದಿನಾಚರಣೆಯು ತಾ. 15 ರಂದು ಬೆಳಗ್ಗೆ 9 ಗಂಟೆಗೆ ನಗರದ ಕೋಟೆ ಆವರಣದಲ್ಲಿ ನಡೆಯಲಿದೆ. ಪ್ರವಾಸೋದ್ಯಮ ಮತ್ತು ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವÀ ಸಾ.ರಾ.ಮಹೇಶ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ.
ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಎಸ್.ಎಲ್ ಭೋಜೇಗೌಡ, ಆಯನೂರು ಮಂಜುನಾಥ್, ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್, ಸಂಸದÀ ಪ್ರತಾಪ್ ಸಿಂಹ, ಜಿ.ಪಂ.ಉಪಾಧ್ಯಕ್ಷೆÀ ಲೋಕೇಶ್ವರಿ ಗೋಪಾಲ್, ನಗರಸಭೆಯ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಜಿ.ಪಂ.ಸಿಇಒ ಪ್ರಶಾಂತ್‍ಕುಮಾರ್ ಮಿಶ್ರ ಇತರರು ಪಾಲ್ಗೊಳ್ಳಲಿದ್ದಾರೆ. ಸಂಜೆ 4.30 ಗಂಟೆಗೆ ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಅವರು ವಹಿಸಲಿದ್ದಾರೆ.