ಮಡಿಕೇರಿ, ಆ. 14: ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ವತಿಯಿಂದ ಪಶುಭಾಗ್ಯ ಯೋಜನೆಯಡಿ ಮಹಿಳೆಯರಿಗಾಗಿ ಕರುಗಳ ಸಾಕಾಣಿಕೆ, ಹೈನುಗಾರಿಕೆ, ಕುರಿ/ ಮೇಕೆ ಸಾಕಾಣಿಕೆ ಘಟಕಗಳ ಅನುಷ್ಠಾನಕ್ಕಾಗಿ ಸೇವಾ ವ್ಯಾಪ್ತಿಯ ವಾಣಿಜ್ಯ ಬ್ಯಾಂಕ್‍ಗಳಿಂದ ಸಾಲ ಪಡೆದು ಬೇಡಿಕೆ ಆಧಾರಿತ ಯೋಜನೆಗಾಗಿ ಜಿಲ್ಲೆಯ ಗುರಿಯನ್ವಯ ಲಭ್ಯವಿರುವ ಅನುದಾನದಲ್ಲಿ ಕಾರ್ಯಕ್ರಮ ಅನುಷ್ಠಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

ಬಡತನ ರೇಖೆಗಿಂತ ಕೆಳಗಿರುವ ಭೂ ರಹಿತ ಕೃಷಿ ಕಾರ್ಮಿಕ ಮಹಿಳೆಯರು, ಅಲ್ಪಸಂಖ್ಯಾತರು ಶೇ. 5, ವಿಕಲಚೇತನರು ಶೇ. 5, ವಿಧವೆಯರು, ದೇವಾದಾಸಿಯರು ಮತ್ತು ಸಂಕಷ್ಟಕ್ಕೊಳಗಾದ ಮಹಿಳೆಯರಿಗೆ ಆದ್ಯತೆ ನೀಡಲಾಗುವದು. ಆಸಕ್ತರು ನಿಗದಿತ ನಮೂನೆಯ ಅರ್ಜಿಗಳನ್ನು ತಮ್ಮ ವ್ಯಾಪ್ತಿಯ ಪಶು ವೈದ್ಯಕೀಯ ಸಂಸ್ಥೆಗಳಿಂದ ಪಡೆದು ಸೂಕ್ತ ದಾಖಲೆಗಳೊಂದಿಗೆ ಸೆಪ್ಟೆಂಬರ್ 10 ರೊಳಗೆ ಕಚೇರಿಯ ವೇಳೆಯಲ್ಲಿ ಅರ್ಜಿಯನ್ನು ಆಯಾಯ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ಪಶು ಆಸ್ಪತ್ರೆ, ಮಡಿಕೇರಿ ದೂ. 08272-228805, ಸಹಾಯಕ ನಿರ್ದೇಶಕರ ಕಚೇರಿ, ಪಶು ಆಸ್ಪತ್ರೆ, ವೀರಾಜಪೇಟೆ ದೂ. 08274-257228, ಸಹಾಯಕ ನಿರ್ದೇಶಕರ ಕಚೇರಿ, ಪಶು ಆಸ್ಪತ್ರೆ, ಸೋಮವಾರಪೇಟೆ ದೂ. 08276-282127ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.