ಸುಂಟಿಕೊಪ್ಪ, ಆ. 14: ಜಿಲ್ಲಾಧಿಕಾರಿ ಆದೇಶವನ್ನು ಉಲ್ಲಂಘಿಸಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಎರಡು ಲಾರಿಗಳನ್ನು ಇಲ್ಲಿನ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಲುಗುಲಿ ತೋಟದಿಂದ ಎಸ್ ಕೆ ಟಿಂಬರ್ಸ್ ಮಾಲೀಕ ಅಬ್ದುಲ್ಲಾ ಎಂಬವರಿಗೆ ಸೇರಿದ ಮರದ ದಿಮ್ಮಿಗಳನ್ನು ಸಾಗಾಟಗೊಳಿಸುತ್ತಿದ್ದ ಟಿಎನ್ 37 ಸಿಎನ್ 3876 ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರದ ದಿಮ್ಮಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೋರೂರು ತೋಟವೊಂದರಿಂದ ಅಕ್ರಮವಾಗಿ ಮರದ ದಿಮ್ಮಿಗಳನ್ನು ತುಂಬಿಸಿಕೊಂಡು ಸಾಗುತ್ತಿದ್ದ ಲಾರಿ ಕೆಎ 12 3265 ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿಯೇ ಮಗುಚಿಕೊಂಡಿದೆ. ಈ ಸಂದರ್ಭ ಲಾರಿಯಲ್ಲಿದ್ದ ಮರದ ದಿಮ್ಮಿಗಳು ನೆಲಕ್ಕುರುಳಿದ್ದವು. ವಿಷಯವರಿತ ಪೊಲೀಸರು ಸ್ಥಳಕ್ಕೆ ಆಗಮಿಸಿ ಲಾರಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಪಿಎಸ್ ಐ ಜಯರಾಮ್, ಸಿಬ್ಬಂದಿಗಳು ಇದ್ದರು.