ಸಿದ್ದಾಪುರ: ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ, ಡೋಮಿನೋಸ್ ಯುವಕ ಸಂಘ ಹಾಗೂ ಶ್ರೀ ಮುತ್ತಪ್ಪ ಯುವ ಕಲಾ ಸಂಘದ ಸಂಯುಕ್ತ ಆಶ್ರಯದಲ್ಲಿ ‘ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ 2018’ ಕಾರ್ಯಕ್ರಮ ನೆಲ್ಲಿಹುದಿಕೇರಿಯಲ್ಲಿ ಆಚರಿಸಲಾಯಿತು.

ನೆಲ್ಲಿಹುದಿಕೇರಿ ಪಟ್ಟಣದ ಹಾಗೂ ಮುಖ್ಯರಸ್ತೆಯ ಇಕ್ಕೆಲಗಳ ಗಿಡ ಗಂಟಿಗಳನ್ನು ಕಡಿದು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷೆ ಪದ್ಮಾವತಿ, ಉಪಾಧ್ಯಕ್ಷೆ ಸಫಿಯಾ, ಡೋಮಿನೋಸ್ ಯುವಕ ಸಂಘ ಹಾಗೂ ಶ್ರೀ ಮುತ್ತಪ್ಪ ಯುವ ಕಲಾ ಸಂಘದ ಪದಾಧಿಕಾರಿಗಳು ಹಾಜರಿದ್ದರು.ಕೂಡಿಗೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೆಬ್ಬಾಲೆ ವಲಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟದ ವತಿಯಿಂದ ಚಿಕ್ಕಅಳುವಾರದಲ್ಲಿ ಸ್ವಚ್ಛತೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಗ್ರಾಮ ಪಂಚಾಯಿತಿ ಸದಸ್ಯೆ ರೂಪ ಹರೀಶ್ ಉದ್ಘಾಟಿಸಿದರು. ವಲಯದ ಮೇಲ್ವಿಚಾರಕ ವಿನೋದ್‍ಕುಮಾರ್ ಧಾರ್ಮಿಕ ಸ್ವಚ್ಛತಾ ಕೇಂದ್ರದ ಸ್ವಚ್ಛತೆ ಕಾಪಾಡಿಕೊಳ್ಳುವ ಬಗ್ಗೆ ಹಾಗೂ ಜನರಿಗೆ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಲಾಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಒಕ್ಕೂಟಗಳ ಮೂಲಕ ಪ್ರತಿ ವರ್ಷ ಸ್ವಚ್ಛತಾ ಕಾರ್ಯಕ್ರಮಗಳನ್ನು ಮಾಡುತ್ತೇವೆ ಎಂದರು.

ಈ ಸಂದರ್ಭ ಸೇವಾಪ್ರತಿನಿಧಿ ಸುಮಲತಾ, ಒಕ್ಕೂಟದ ಕಾರ್ಯದರ್ಶಿ ಪ್ರೇಮ, ಪ್ರಗತಿಬಂಧು ಸ್ವಸಹಾಯ ಸಂಘದ ಸದಸ್ಯರು ಪಾಲ್ಗೊಂಡಿದ್ದರು.ಕುಶಾಲನಗರ: ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಹೆಬ್ಬಾಲೆ ವಲಯದ ಕಾರ್ಯಕರ್ತರಿಂದ ಚಿಕ್ಕಅಳುವಾರ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಹೆಬ್ಬಾಲೆ ಗ್ರಾ.ಪಂ. ಸದಸ್ಯೆ ರೂಪ ಹರೀಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಗ್ರಾಮದಲ್ಲಿ ಧಾರ್ಮಿಕ ಸ್ವಚ್ಛತಾ ಸಂಘದ ಉದ್ಘಾಟನಾ ಕಾರ್ಯ ನಡೆಯಿತು.

ಹೆಬ್ಬಾಲೆ ವಲಯದ ಮೇಲ್ವಿಚಾರಕರಾದ ವಿನೋದ್‍ಕುಮಾರ್, ಸೇವಾ ಪ್ರತಿನಿಧಿ ಸುಮಲತಾ, ಒಕ್ಕೂಟದ ಕಾರ್ಯದರ್ಶಿ ಪ್ರೇಮ, ಪದಾಧಿಕಾರಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು.ಸುಂಟಿಕೊಪ್ಪ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಅಯ್ಯಪ್ಪ ಸ್ವಾಮಿ ದೇವಸ್ಥಾನ ಆವರಣವನ್ನು ಸ್ವಚ್ಛಗೊಳಿಸಲಾಯಿತು. ಇಲ್ಲಿನ ಅಯ್ಯಪ್ಪ ದೇವಸ್ಥಾನ ಆವರಣದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಶ್ರೀಧರ್ ಮತ್ತು ಬಿ.ಎಂ. ಸುರೇಶ್ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದ ಮೇಲ್ವಿಚಾರಕಿ ಕಾಂತಿಕ ಮಣಿ ಮಾತನಾಡಿದರು. ಈ ಸಂದರ್ಭ ತಲೆ ಹೊರೆ ಕನ್ನಡಾಭಿಮಾನಿ ಸಂಘದ ಅಧ್ಯಕ್ಷ ಎಂ.ಎಸ್. ರವಿ, ದೇವಸ್ಥಾನ ಸಮಿತಿಯ ಪದಾಧಿಕಾರಿಗಳಾದ ಸುರೇಶ್ ಗೋಪಿ, ಶೇಖರ್ (ಅಣ್ಣು), ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವ ಸಹಾಯ ಸಂಘಗಳ ಒಕ್ಕೂಟ ಅಧ್ಯಕ್ಷೆ ಸೆಲ್ವಿ, ಮೇಲ್ವಿಚಾರಕಿ ಚಿತ್ರಾ ಸುರೇಶ್ ಇದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವಸಹಾಯ ಸಂಘಗಳಾದ ರಾಘವೇಂದ್ರ, ಪರಮೇಶ್ವರಿ, ಶ್ರೀಕಂಠ, ಮಹಿಳಾ ಸದಸ್ಯರು ದೇವಸ್ಥಾನ ಆವರಣ ಸ್ವಚ್ಛಗೊಳಿಸಿದರು.