ಮಡಿಕೇರಿ, ಆ. 15: ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳು ಹಾಗೂ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಜನ ಸಂಪರ್ಕ ಸಭೆ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ತಾ. 16 ರಂದು (ಇಂದು) ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸೋಮವಾರಪೇಟೆಯ ಪ್ರವಾಸಿ ಮಂದಿರದಲ್ಲಿ, ಮಧ್ಯಾಹ್ನ 3 ರಿಂದ 4 ಗಂಟೆಯವರೆಗೆ ಶನಿವಾರಸಂತೆಯ ಪ್ರವಾಸಿ ಮಂದಿರದಲ್ಲಿ, ತಾ. 17 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಾಪೋಕ್ಲುವಿನ ಪ್ರವಾಸಿ ಮಂದಿರದಲ್ಲಿ, ತಾ. 18 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ವೀರಾಜಪೇಟೆಯ ಪ್ರವಾಸಿ ಮಂದಿರದಲ್ಲಿ, ಮಧ್ಯಾಹ್ನ 12.30 ರಿಂದ 2 ಗಂಟೆಯವರೆಗೆ ಗೋಣಿಕೊಪ್ಪ ಪತ್ರಿಕಾ ಭವನದಲ್ಲಿ ಹಾಗೂ ಮಧ್ಯಾಹ್ನ 3 ರಿಂದ 4 ಗಂಟೆಯವರೆಗೆ ಪ್ರವಾಸಿ ಮಂದಿರ ಪೊನ್ನಂಪೇಟೆಯಲ್ಲಿ ಭ್ರಷ್ಟಾಚಾರ ನಿಗ್ರಹದಳ ಮಡಿಕೇರಿ ಪೊಲೀಸ್ ಠಾಣಾ ವತಿಯಿಂದ ಅಹವಾಲು ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಭ್ರಷ್ಟಾಚಾರ ನಿಗ್ರಹ ದಳ, ಪೊಲೀಸ್ ಠಾಣೆ, ಶಾಂತಿ ನಿಲಯ, ಕಾನ್ವೆಂಟ್ ಜಂಕ್ಷನ್ ಮಡಿಕೇರಿ. ದೂರವಾಣಿ ಸಂಖ್ಯೆ 08272-222100 ನ್ನು ಸಂಪರ್ಕಿಸಬಹುದು ಎಂದು ಭ್ರಷ್ಟಾಚಾರ ನಿಗ್ರಹದಳದ ಠಾಣಾಧಿಕಾರಿ ಹಾಗೂ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.