ಮಡಿಕೇರಿ, ಆ. 15: ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯ 2018-19ನೇ ಸಾಲಿನ ಗ್ರಾಮಸಭೆಯನ್ನು ತಾ. 21 ರಂದು ಬೆಳಿಗ್ಗೆ 11 ಗಂಟೆಗೆ ಗ್ರಾ.ಪಂ. ಅಧ್ಯಕ್ಷೆ ಕೆ.ಎಸ್. ಭಾರತಿ ಅಧ್ಯಕ್ಷತೆಯಲ್ಲಿ ಗುಡ್ಡೆಹೊಸೂರು ಗ್ರಾ.ಪಂ. ಕಚೇರಿ ಹಿಂಭಾಗದ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ.

ಸಭೆಯಲ್ಲಿ ಗ್ರಾ.ಪಂ.ಉಪಾಧ್ಯಕ್ಷರು, ಸದಸ್ಯರುಗಳು, ಜಿ.ಪಂ.ಮತ್ತು ತಾ.ಪಂ.ಸದಸ್ಯರು ಹಾಗೂ ಇಲಾಖಾಧಿಕಾರಿಗಳು, ಕುಶಾಲನಗರದ ಸಹಾಯಕ ತೋಟಗಾರಿಕಾ ಅಧಿಕಾರಿ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಗುಡ್ಡೆಹೊಸೂರು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಅವರು ತಿಳಿಸಿದ್ದಾರೆ.