ಸೋಮವಾರಪೇಟೆ, ಆ. 15: ತಾಲೂಕಿನ ಶುಂಠಿಮಂಗಳೂರು ಗ್ರಾಮದ ಶ್ರೀ ಬಸವೇಶ್ವರ ದೇವಾಲಯ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಕ್ಷೇತ್ರದಿಂದ ರೂ. 30 ಸಾವಿರ ಸಹಾಯಧನ ಒದಗಿಸಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ವೈ. ಪ್ರಕಾಶ್ ಅವರು ಸಹಾಯಧನದ ಚೆಕ್‍ನ್ನು ದೇವಾಲಯ ಸಮಿತಿ ಅಧ್ಯಕ್ಷ ಹೂವಯ್ಯ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಯೋಜನೆಯ ಮೇಲ್ವಿಚಾರಕ ಕೆ. ರಮೇಶ್, ದೇವಾಲಯ ಸಮಿತಿ ಉಪಾಧ್ಯಕ್ಷ ಸಣ್ಣಪ್ಪ, ಕಾರ್ಯದರ್ಶಿ ಹರೀಶ್ ಸೇರಿದಂತೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.