ಸೋಮವಾರಪೇಟೆ, ಆ. 15: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಘಟನೆ ಸಮೀಪದ ಕುಂಬೂರು-ಮಾದಾಪುರ ಮಾರ್ಗ ಮಧ್ಯೆ ನಡೆದಿದೆ.

ಹಾಸನ ಅರಕಲಗೂಡಿನ ದರ್ಶನ್ ಎಂಬವರು ತನ್ನ ಸ್ನೇಹಿತರೊಂದಿಗೆ ಮಡಿಕೇರಿಗೆ ತೆರಳಿ ಅಲ್ಲಿಂದ ವಾಪಸ್ ಆಗಮಿಸುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ರಸ್ತೆ ಬದಿಯಿದ್ದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿದೆ. ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದಿದ್ದರೆ, ಕಾರಿನ ಮುಂಭಾಗ ಜಖಂಗೊಂಡಿದೆ. ಅದೃಷ್ಟವಶಾತ್ ಯಾವದೇ ಹೆಚ್ಚಿನ ಹಾನಿ ಸಂಭವಿಸಿಲ್ಲ. ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.