ಮಡಿಕೇರಿ, ಆ. 20 : ಮಹಾಮಳೆಯಿಂದ ತತ್ತರಿಸಿರುವ ಕೊಡಗು ಜಿಲ್ಲೆಯಲ್ಲಿ ಇದುವರೆಗೆ ಆಗಿರುವ ನಷ್ಟದ ಪ್ರಮಾಣವನ್ನು ಅಂದಾಜಿಸಿ ತಕ್ಷಣ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸಲ್ಲಿಸುವಂತೆ ಸಂಸದೆ ಶೋಭಾ ಕರಂದ್ಲಾಜೆ, ಜಿಲ್ಲಾಡಳಿತಕ್ಕೆ ಸಲಹೆ ಮಾಡಿದ್ದು, ವಿರೋಧ ಪಕ್ಷವಾಗಿ ಬಿಜೆಪಿ ಕೂಡ ಕೇಂದ್ರಕ್ಕೆ ಅಗತ್ಯ ಪ್ರಸ್ತಾವನೆಯನ್ನು ಸಲ್ಲಿಸಲಿದೆಯೆಂದು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಮಳೆಗೆ ಕೊಡಗು ಜಿಲ್ಲೆ ತತ್ತರಿಸಿದ್ದು, ಮಡಿಕೇರಿ ಮತ್ತು ಸೋಮವಾರಪೇಟೆ ತಾಲೂಕಿನ ಹಲವಾರು ಗ್ರಾಮಗಳು ನಾಶವಾಗಿವೆ. ಸಾವಿರಾರು ಮನೆಗಳು ಮಣ್ಣು ಪಾಲಾಗಿವೆ. 10 ಸಾವಿರಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದು, ತೋಟಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ನಷ್ಟದ ಅಂದಾಜು ಮಾಡುವದು ಸಧ್ಯದ ಪರಿಸ್ಥಿತಿಯಲ್ಲಿ ಕಷ್ಟದಾಯಕವಾದರೂ, ಅಂದಾಜಿನ ಹಾನಿಯ ವರದಿಯನ್ನು ತಯಾರಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದಲ್ಲಿ ಅಗತ್ಯ ಪರಿಹಾರಕ್ಕೆ ತಾವುಗಳು ಕೂಡ ಕೇಂದ್ರ್ರದ ಮೇಲೆ ಒತ್ತಡ ಹೇರಿ ಹಣ ಬಿಡುಗಡೆಗೆ ಪ್ರಯತ್ನಿಸಬಹುದಾಗಿದೆ ಎಂದರು.

ಜಿಲ್ಲಾಡಳಿತದ ಅಂದಾಜಿನ ಪ್ರಕಾರ ಇದುವರೆಗೆ 7 ಮಂದಿ ಮಾತ್ರ ಸಾವಿಗೀಡಾಗಿರುವದಾಗಿ ಹೇಳಲಾಗುತ್ತಿದೆ. ಆದರೆ, ಹಲವಾರು ಮಂದಿ ನೀರಿನಲ್ಲಿ ಕೊಚ್ಚಿ ಹೋಗಿ, ಬೆಟ್ಟಗುಡ್ಡಗಳ ಕುಸಿತದಲ್ಲಿ ಸಿಲುಕಿ ಮಣ್ಣಿನಡಿ ಆಗಿಹೋಗಿರುವ ಶಂಕೆ ಇದೆ. ಜಾನುವಾರುಗಳು ಕೂಡ ಸಾವಿಗೀಡಾಗಿದ್ದು, ಇಂತಹ ಸಂದರ್ಭದಲ್ಲಿ ರಾಜ್ಯದ ಮುಖ್ಯ ಮಂತ್ರಿಗಳು ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸುವ ಬದಲು ‘ಬಂದ ಪುಟ್ಟ ಹೋದ ಪುಟ್ಟ’ಎನ್ನುವಂತೆ ವರ್ತಿಸುತ್ತಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಯವರು ರಕ್ಷಣಾ ಸಚಿವರಿಗೆ ಮನವಿ ಮಾಡುವ ಸಂದರ್ಭವೂ ತಮ್ಮ ಸ್ವಂತ ಉಪಯೋಗಕ್ಕೆ ಹೆಲಿಕಾಪ್ಟರ್ ಮತ್ತು ರಕ್ಷಣಾ ಸಿಬ್ಬಂದಿಗಳನ್ನು ಕಳುಹಿಸಿಕೊಡುವಂತೆ ಮಾತ್ರ ಕೋರಿದ್ದು, ಸಂತ್ರಸ್ತರ ರಕ್ಷÀಣೆಗೆ ಅಗತ್ಯವಿರುವ ಹೆಲಿಕಾಪ್ಟರ್‍ಗಳನ್ನು ಮತ್ತು ಸಿಬ್ಬಂದಿಗಳನ್ನು ಕೇಳಲಿಲ್ಲ. ಅದಲ್ಲದೆ, ಮುಖ್ಯಮಂತ್ರಿಗಳು ವೈಮಾನಿಕ ಸಮೀಕ್ಷೆ ನಡೆಸುವ ಸಂದರ್ಭದಲ್ಲು ಗಂಭೀರತೆಯನ್ನು ಪ್ರದರ್ಶಿಸುವ ಬದಲು ಪತ್ರಿಕೆಗಳ ಮೇಲೆ ಕಣ್ಣಾಡಿಸುವದರಲ್ಲಿ ಕಾಲ ಕಳೆದು ನಿರ್ಲಕ್ಷ್ಯತೆ ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿದರು.

ಸಚಿವ ರೇವಣ್ಣ ಅವರು ಹಾಲಿನ ಪುಡಿ ಮತ್ತು ಬಿಸ್ಕೆಟ್ ಅನ್ನು ಸಂತ್ರಸ್ತರಿಗೆ ಎಸೆಯುವ ಮೂಲಕ ಗಂಭೀರತೆ, ಕಳಕಳಿ ಮತ್ತು ಮಾನವೀಯತೆ ಇಲ್ಲ ಎಂಬದನ್ನು ತೋರ್ಪಡಿಸಿದ್ದಾರೆ, ಇದು ಸರ್ಕಾರಕ್ಕೆ ಬಡಜನರ ಮೇಲಿರುವ ನಿರ್ಲಕ್ಷ್ಯತೆಗೆ ಸಾಕ್ಷಿಯಾಗಿದೆ ಎಂದು ಟೀಕಿಸಿದರು.

ಸರ್ಕಾರ ಹಿರಿಯ ಅಧಿಕಾರಿಗಳನ್ನು ಜಿಲ್ಲೆಗೆ ಕಳುಹಿಸಿದ್ದರೂ ನಿರಾಶ್ರಿತರ ಶಿಬಿರಗಳಿಗೆ ಯಾವದೇ ಅಧಿಕಾರಿಗಳನ್ನು ನಿಯೋಜನೆ ಮಾಡಿಲ್ಲ. ಇನ್ನಾದರು 41 ಪುನರ್ವಸತಿ ಕೇಂದ್ರ್ರಗಳಿಗೆ ಜವಾಬ್ದಾರಿಯನ್ನು ನಿರ್ವಹಿಸುವ ಅಧಿಕಾರಿಗಳನ್ನು ನಿಯೋಜಿಸಬೆÉೀಕೆಂದು ಆಗ್ರಹಿಸಿದರು. ಜಿಲ್ಲಾಡಳಿತ ಕನಿಷ್ಟ ಪುನರ್ವಸತಿ ಕೇಂದ್ರಗಳಿಗೆ ಅಡುಗೆಯವರನ್ನು ನಿಯುಕ್ತಿಗೊಳಿಸುವದರೊಂದಿಗೆ, ಶೌಚಾಲಯಗಳನ್ನು ನಿರ್ಮಿಸಲು ಮತ್ತು ಹೊರ ಜಿಲ್ಲೆಗಳಿಂದ ಕೊಡಗಿಗೆ ಆಗಮಿಸಿರುವ ವೈದ್ಯರುಗಳಿಗೆ ಅಗತ್ಯ ಸೇವೆಯನ್ನು ಮಾಡಲು ಅವಕಾಶ ಕಲ್ಪಿಸಲು ದಿನಗಳನ್ನು ನಿಗದಿಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು.

ನಿರಾಶ್ರಿತರ ಶಿಬಿರಗಳಲ್ಲಿರುವ ಸಂತ್ರಸ್ತರಿಗೆ ತಾತ್ಕಾಲಿಕ ಮತ್ತು ಶಾಶ್ವತ ಪುನರ್ವಸತಿ ಕಲ್ಪಿಸುವ ಬಗ್ಗೆ ಸರ್ಕಾರ ಮತ್ತು ಜಿಲ್ಲಾಡಳಿತ ಕೂಡಲೆ ಚಿಂತನೆ ನಡೆಸಬೇಕು. ಭೂ ಕುಸಿತ ಮತ್ತು ಪ್ರವಾಹಕ್ಕೆ ಸಿಲುಕಿರುವ ಗ್ರಾಮಗಳಿಗೆ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಂದಾಯ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಎಷ್ಟು ಜನ ನಾಪತ್ತೆಯಾಗಿದ್ದಾರೆ, ಎಷ್ಟು ಮಂದಿ ಸಾವನ್ನಪ್ಪಿದ್ದಾರೆ, ಕೊಚ್ಚಿಹೋದ ತೋಟದ ಪ್ರÀಮಾಣವೆಷ್ಟು, ಹಾನಿಗೊಳಗಾದ ಮತ್ತು ಕುಸಿದ ಮನೆಗಳೆಷ್ಟು ಎಂಬ ಬಗ್ಗೆ ಅಧಿಕೃತವಾದ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯ ಮಾಡಬೆÉೀಕು ಎಂದರು.

ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ, ನಾವು ಏನು ರಾಜಕೀಯ ಮಾಡಿದ್ದೇವೆ ಎನ್ನುವದನ್ನು ಮುಖ್ಯಮಂತ್ರಿಗಳು ಸ್ಪಷ್ಡಪಡಿಸಲಿ. ಸಂತ್ರಸ್ತರಿಗೆ ಪಕ್ಷದ ವತಿಯಿಂದ ನೆರವು ನೀಡಿದ್ದ, ದಾನಿಗಳು ನೀಡಿದ ಸಾಮಾಗ್ರಿಗಳನ್ನು ವ್ಯವಸ್ಥಿತವಾಗಿ ವಿತರಿಸಿರುವದು ರಾಜಕೀಯವೇ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಬಿನ್ ದೇವಯ್ಯ ಹಾಗೂ ಮಡಿಕೆÉೀರಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅನಿತಾ ಪೂವಯ್ಯ ಉಪಸ್ಥಿತರಿದ್ದರು.