ಕೂಡಿಗೆ, ಆ. 20: ಕುಶಾಲನಗರ ಹೋಬಳಿ ವ್ಯಾಪ್ತಿಯಲ್ಲಿ ನಿರಾಶ್ರಿತರಿಗೆ ತೆರೆಯಲಾಗಿರುವ ಪರಿಹಾರ ಕೇಂದ್ರಗಳಿಗೆ ರಾಜ್ಯ ಸರ್ಕಾರದ ಆದೇಶದನ್ವಯ ತಾಲೂಕು ಉಸ್ತುವಾರಿ ಅಧಿಕಾರಿಗಳು ಭೇಟಿ ನೀಡಿದರು.

ಮುಳ್ಳುಸೋಗೆ, ಹುಲುಗುಂದ (ಹಾರಂಗಿ), ಮದಲಾಪುರ, ಕೂಡಿಗೆ ಕೇಂದ್ರಗಳಿಗೆ ತಾಲೂಕು ಉಸ್ತುವಾರಿ ಅಧಿಕಾರಿಗಳಾಗಿ ನೇಮಕಗೊಂಡಿರುವ ಹಿಂದಿನ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಭೂ ದಾಖಲಾತಿ ಅಧಿಕಾರಿ ವಿದ್ಯದಾಹಿನಿ, ತಾಲೂಕು ತಹಶೀಲ್ದಾರ್ ಮಹೇಶ್ ಮೊದಲಾದವರು ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿ, ಬೇಕಾಗುವ ಸೌಲಭ್ಯಗಳನ್ನು ಒದಗಿಸಲು ಸಂಬಂಧಿಸಿದವರಿಗೆ ಸೂಚನೆ ನೀಡಿದರು.