ವೀರಾಜಪೇಟೆ, ಆ. 20: ವೀರಾಜಪೇಟೆಯ ನಾಲ್ಕು ಕಡೆಗಳಲ್ಲಿ ಹಮ್ಮಿಕೊಂಡಿರುವ ತಾತ್ಕಾಲಿಕ ಪರಿಹಾರ ಕೇಂದ್ರಗಳಿಗೆ ಇಲ್ಲಿನ ಸಮುಚ್ಚಯ ನ್ಯಾಯಾಲಯದ ನ್ಯಾಯಾಧೀಶರುಗಳಾದ ಜಯಪ್ರಕಾಶ್, ಶಿವಾನಂದ ಲಕ್ಷ್ಮಣ್ ಅಂಚಿ, ಇಲ್ಲಿನ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ವಿಶ್ವನಾಥ್ ಸಿಂಪಿ, ತಾಲೂಕು ತಹಶೀಲ್ದಾರ್ ಆರ್. ಗೋವಿಂದರಾಜ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎನ್.ಪಿ. ಹೇಮ್ ಕುಮಾರ್ ಭೇಟಿ ನೀಡಿ ಪ್ರಕೃತಿ ವಿಕೋಪದ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಅಗತ್ಯ ನೆರವು ನೀಡುವದಾಗಿ ಭರವಸೆ ನೀಡಿದರು.