ಮಡಿಕೇರಿ, ಆ. 21: ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಸಂತ್ರಸ್ತರಿಗೆ ದಾನಿಗಳಿಂದ ಹರಿದು ಬರುತ್ತಿರುವ ಪರಿಹಾರ ಸಾಮಗ್ರಿಗಳು ಅನೇಕ ಕಡೆಗಳಲ್ಲಿ ದುರುಪಯೋಗವಾಗುತ್ತಿದ್ದು, ಜಿಲ್ಲಾಡಳಿತ ದುರುಪಯೋಗ ತಡೆಗೆ ಕ್ರಮ ಕೈಗೊಳ್ಳುವಂತೆ ನಗರ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ರಜಾಕ್ ಹಾಗೂ ನಗರಸಭಾ ಸದಸ್ಯ ಚುಮ್ಮಿದೇವಯ್ಯ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.
ನಗರದ ಪ.ಪೂ.ಕಾಲೇಜು ಆವರಣ ಸೇರಿದಂತೆ ಅಲ್ಲಲ್ಲಿ ರಾಶಿ ರಾಶಿ ಹರಿದು ಬಂದಿರುವ ವಸ್ತುಗಳನ್ನು ಯಾರ್ಯಾರೋ ವಾಹನಗಳಲ್ಲಿ ತುಂಬಿಸಿಕೊಂಡು ಸಾಗಿಸುತ್ತಿರುವದಾಗಿ ಅವರುಗಳು ಆರೋಪಿಸಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತ ನಿಗಾವಹಿಸಿ ನೈಜ ಸಂತ್ರಸ್ತರಿಗೆ ಪರಿಹಾರ ಸೌಲಭ್ಯ ಕಲ್ಪಿಸುವಲ್ಲಿ ಕಾಳಜಿ ವಹಿಸಬೇಕೆಂದು ಒತ್ತಾಯಿಸಿ ‘ಶಕ್ತಿ’ಗೆ ಹೇಳಿಕೆ ನೀಡಿದ್ದಾರೆ.
ಅಲ್ಲದೆ ಬ್ರೆಡ್, ಬನ್ ಇತ್ಯಾದಿ ಅತ್ಯಧಿಕ ಸಂಖ್ಯೆಯಲ್ಲಿ ಬರುತ್ತಿದ್ದು, ತಿನ್ನುವವರಿಲ್ಲವಾಗಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.