ಮಡಿಕೇರಿ, ಆ. 21: 2018-19ನೇ ಶೈಕ್ಷಣಿಕ ಸಾಲಿಗೆ ಎಸ್.ಎಸ್.ಎಲ್.ಸಿ. /10ನೇ ತರಗತಿ ಪೂರಕ ಪರೀಕ್ಷೆ ಹಾಗೂ ಮರು ಮೌಲ್ಯಮಾಪನದಲ್ಲಿ ಉತ್ತೀರ್ಣರಾದ ಪ್ರಥಮ ಪಿ.ಯು.ಸಿ. ತರಗತಿಗೆ ದಾಖಲಾಗಲು ವಿದ್ಯಾರ್ಥಿಗಳಿಗೆ ದಂಡ ಶುಲ್ಕವಿಲ್ಲದೆ ಹತ್ತಿರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ದಾಖಲಾತಿಗೆ ತಾ. 25 ರವರೆಗೆ ಅನುಮತಿ ನೀಡಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕವನ್ನು ವಿಸ್ತರಿಸಿ ಆದೇಶಿಸಲಾಗಿದೆ.

ಸೂಚಿತ ದಿನಾಂಕಗಳಲ್ಲಿ ದಾಖಲಾಗುವ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿಗಳು ಈ ಶೈಕ್ಷಣಿಕ ವರ್ಷದಲ್ಲಿ ವಾರ್ಷಿಕ ಶೇ. 75 ರಷ್ಟು ಹಾಜರಾತಿಯನ್ನು ಪಡೆಯುವ ಬಗ್ಗೆ ಮುಚ್ಚಳಿಕೆಯನ್ನು ಕಡ್ಡಾಯವಾಗಿ ಪಡೆದು ದಾಖಲಾತಿಯನ್ನು ನೀಡುವದು. ವಿದ್ಯಾರ್ಥಿಗಳಿಗೆ ರಜಾ ದಿನಗಳಲ್ಲಿ ಹಾಗೂ ಭಾನುವಾರಗಳಲ್ಲಿ ವಿಶೇಷ ತರಗತಿಗಳನ್ನು ನಡೆಸಿ ಇಲ್ಲಿಯವರೆಗೆ ನಷ್ಟವಾಗಿರುವ ಪಾಠಗಳನ್ನು ಸರಿದೂಗಿಸಲು ಪದವಿಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.