ಮಡಿಕೇರಿ, ಆ. 21: ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಜಲಪ್ರಳಯ, ಭೂಕುಸಿತದಿಂದಾಗಿ ಜನರು ಮನೆ ಹಾಗೂ ಆಸ್ತಿ ಕಳೆದುಕೊಂಡಿದ್ದು, ಇಡೀ ಜಿಲ್ಲೆ ಶೋಕದಲ್ಲಿ ಮುಳುಗಿದ್ದು, ಜಿಲ್ಲೆಯ ಎಲ್ಲಾ ಸರಕಾರಿ ಹಾಗೂ ಅನುದಾನಿತ ನೌಕರ ಬಂಧುಗಳು ಸಂತ್ರಸ್ಥರಿಗೆ ನೆರವು ನೀಡಲು ಉದ್ದೇಶಿಸಿದ್ದು, ತಮ್ಮ ಒಂದು ದಿನದ ವೇತನವನ್ನು ಜಿಲ್ಲಾಧಿಕಾರಿ ಪರಿಹಾರ ನಿಧಿಗೆ ಪುನರ್ವಸತಿ ಕಲ್ಪಿಸುವ ಸಲುವಾಗಿ ನೀಡಲು ಈ ದಿನ ನಡೆದ ಸರ್ವ ನೌಕರರ ಸಂಘದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ ಸರಕಾರಿ ಹಾಗೂ ಅನುದಾನಿತ ನೌಕರರ ಒಂದು ದಿನದ ವೇತನವನ್ನು ಈ ತಿಂಗಳ ವೇತನದಿಂದ ಕಟಾಯಿಸಿ ನೆರೆ ಸಂತ್ರಸ್ಥರ ನಿಧಿಗೆ ಜಮಾ ಮಾಡಿಕೊಳ್ಳುವಂತೆ ಕೋರಲಾಗಿದೆ. ಈ ಬಗ್ಗೆ ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ಹಾಗೂ ಖಜಾನಾಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ