ಮಡಿಕೇರಿ, ಆ. 21: ಮಳೆ- ಗಾಳಿಯಿಂದ ಕೊಡಗಿನಲ್ಲಿ ಉಂಟಾದ ಅನಾಹುತಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಮುಂದಿನ ವಾರ ಜಿಲ್ಲೆಗೆ ಆಗಮಿಸಿ ಪರಿಹಾರ ವಿತರಣೆ ಮಾಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ತಿಳಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೊಡಗಿನ ಮೂರು ತಾಲೂಕುಗಳಲ್ಲಿ 32 ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆಯಿಂದ ತೀವ್ರ ಅನಾಹುತಗಳಾಗಿದ್ದು, ಮಡಿಕೇರಿ ತಾಲೂಕಿನ 12, ಸೋಮವಾರಪೇಟೆ ತಾಲೂಕಿನ 12 ಹಾಗೂ ವೀರಾಜಪೇಟೆ ತಾಲೂಕಿನ 8 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು ಅತಿವೃಷ್ಠಿಯ ಹೊಡೆತಕ್ಕೆ ಸಿಲುಕಿ ನಲುಗಿದೆ. ಈ ಹಿನ್ನೆಲೆಯಲ್ಲಿ ಇಂದು ದೂರವಾಣಿ ಮೂಲಕ ಮಾತನಾಡಿದ ಮುಖ್ಯಮಂತ್ರಿಗಳು

(ಮೊದಲ ಪುಟದಿಂದ) ನಷ್ಟದ ಬಗ್ಗೆ ಸಮಗ್ರ ವರದಿ ತಯಾರಿಸುವಂತೆ ಸೂಚಿಸಿದ್ದು, ಒಂದು ಸಾವಿರ ಕೋಟಿ ನಷ್ಟವಾಗಿದ್ದರೂ ಸರಿ ಅದನ್ನು ಭರಿಸಲು ಸರ್ಕಾರ ಸಿದ್ಧವಿದೆ ಎಂದು ಭರವಸೆ ನೀಡಿದ್ದಾರೆ ಎಂದು ಮಹೇಶ್ ಮಾಹಿತಿಯಿತ್ತರು. ಸದ್ಯದ ಮಟ್ಟಿಗೆ ಕೊಡಗಿನಲ್ಲಿ ಪರಿಸ್ಥಿತಿ ಹತೋಟಿಗೆ ಬರುತ್ತಿದ್ದು, ಸಂಕಷ್ಟದಲ್ಲಿದ್ದ ಎಲ್ಲರನ್ನೂ ರಕ್ಷಿಸಲಾಗಿದೆ. ಒಂದು ವೇಳೆ ಸಂಕಷ್ಟದಲ್ಲಿ ಸಿಲುಕಿರುವವರ ಬಗ್ಗೆ, ನಾಪತ್ತೆಯಾಗಿರುವವರ ಬಗ್ಗೆ ಮಾಹಿತಿ

(ಮೊದಲ ಪುಟದಿಂದ) ನಷ್ಟದ ಬಗ್ಗೆ ಸಮಗ್ರ ವರದಿ ತಯಾರಿಸುವಂತೆ ಸೂಚಿಸಿದ್ದು, ಒಂದು ಸಾವಿರ ಕೋಟಿ ನಷ್ಟವಾಗಿದ್ದರೂ ಸರಿ ಅದನ್ನು ಭರಿಸಲು ಸರ್ಕಾರ ಸಿದ್ಧವಿದೆ ಎಂದು ಭರವಸೆ ನೀಡಿದ್ದಾರೆ ಎಂದು ಮಹೇಶ್ ಮಾಹಿತಿಯಿತ್ತರು. ಸದ್ಯದ ಮಟ್ಟಿಗೆ ಕೊಡಗಿನಲ್ಲಿ ಪರಿಸ್ಥಿತಿ ಹತೋಟಿಗೆ ಬರುತ್ತಿದ್ದು, ಸಂಕಷ್ಟದಲ್ಲಿದ್ದ ಎಲ್ಲರನ್ನೂ ರಕ್ಷಿಸಲಾಗಿದೆ. ಒಂದು ವೇಳೆ ಸಂಕಷ್ಟದಲ್ಲಿ ಸಿಲುಕಿರುವವರ ಬಗ್ಗೆ, ನಾಪತ್ತೆಯಾಗಿರುವವರ ಬಗ್ಗೆ ಮಾಹಿತಿ ಮಾಡಿದರು. ಜಿಲ್ಲೆಯ 104 ಗ್ರಾಮ ಪಂಚಾಯಿತಿಗಳಲ್ಲಿರುವ ನೊಂದವರಿಗೆ ಅಗತ್ಯ ಸೌಲಭ್ಯಗಳನ್ನು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ವಿತರಿಸಲಾಗಿದ್ದು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ಸಹಾಯ ಮಾಡುವಂತೆ ಸೂಚಿಸಲಾಗಿದೆ ಎಂದರು.

ಈ ಸಂದರ್ಭ ಕಂದಾಯ ಕಾರ್ಯದರ್ಶಿ ಅಂಬುದಾಸ್, ಜಿಲ್ಲಾಧಿಕಾರಿ ಶ್ರೀವಿದ್ಯಾ, ಸಿಇಓ ಪ್ರಶಾಂತ್ ಕುಮಾರ್ ಮಿಶ್ರಾ, ಚಾರುಲತಾ ಸೋಮಲ್ ಇದ್ದರು.