ಮಡಿಕೇರಿ, ಆ. 22: ಕೇಂದ್ರ ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ತಾ. 24ರಂದು (ನಾಳೆ) ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.ನಾಳೆ ಬೆಳಿಗ್ಗೆ 9 ಗಂಟೆಗೆ ಹಾರಂಗಿ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ. ನಂತರ ತೀವ್ರ ಮಳೆಹಾನಿಗೆ ಒಳಗಾಗಿರುವ ಪ್ರದೇಶಗಳಾದ ಕುಶಾಲನಗರದ ಸಾಯಿ ಬಡಾವಣೆ, ಕುವೆಂಪು ಬಡಾವಣೆಗಳಿಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 10.15 ಗಂಟೆಗೆ ಮಾದಾಪುರದ ಬರೇ ಕುಸಿತ ಪ್ರದೇಶಕ್ಕೆ ಭೇಟಿ, ನಂತರ ಬೆಳಗ್ಗೆ 11.15 ಗಂಟೆಗೆ ನಗರದ ಮೈತ್ರಿ ಭವನಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.