ಮಡಿಕೇರಿ, ಆ. 22: ನಗರಾಭಿವೃದ್ಧಿ ಮತ್ತು ವಸತಿ ಸಚಿವರಾದ ಯು.ಟಿ. ಖಾದರ್ ಅವರು ತಾ. 23 ರಂದು (ಇಂದು) ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಬೆಳಿಗ್ಗೆ 9.30 ಕುಶಾಲನಗರದ ಪ್ರವಾಸಿ ಮಂದಿರಕ್ಕೆ ಆಗಮಿಸಲಿದ್ದಾರೆ. ಬಳಿಕ ಕುಶಾಲನಗರ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ನಂತರ ಮಡಿಕೇರಿಗೆ ಆಗಮಿಸಿ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ನಡೆಸಲಿದ್ದಾರೆ.