ಕೂಡಿಗೆ, ಆ. 22: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲೇನಹಳ್ಳಿ ಗ್ರಾಮದ ಲಕ್ಷ್ಮಮ್ಮ ಎಂಬವರ ಮನೆಯಲ್ಲಿ ನಿನ್ನೆ ರಾತ್ರಿ ಮಳೆಯಿಂದಾಗಿ ಮನೆಯ ಗೋಡೆ ಮತ್ತು ಮೇಲ್ಚಾವಣಿ ಕುಸಿದು ಬಿದ್ದಿದೆ.

ಯಾವದೇ ಪ್ರಾಣಹಾನಿಯಾಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆಯವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.