ಶನಿವಾರಸಂತೆ, ಆ. 23: ಪಟ್ಟಣದ ತ್ಯಾಗರಾಜ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಗ್ರಾಮ ಪಂಚಾಯಿತಿ ವತಿಯಿಂದ ಬ್ಯಾಂಡ್ ಸೆಟ್ ಕೊಡುಗೆಯಾಗಿ ವಿತರಿಸಲಾಯಿತು.

ಶಾಲಾಭಿವೃದ್ಧಿ ಸಮಿತಿ ಸದಸ್ಯ ಶಿವಕುಮಾರ್ ಶಾಲೆ ಪರವಾಗಿ ಪಂಚಾಯಿತಿ ಅಧ್ಯಕ್ಷ ಎಂ.ಹೆಚ್. ಮಹಮ್ಮದ್ ಗೌಸ್ ಅವರಿಂದ ಬ್ಯಾಂಡ್ ಸೆಟ್ ಸ್ವೀಕರಿಸಿದರು. ಈ ಸಂದರ್ಭ ಪಂಚಾಯಿತಿ ಉಪಾಧ್ಯಕ್ಷೆ ಗೀತಾ ಹರೀಶ್, ಸದಸ್ಯರಾದ ಉಷಾ, ಹೇಮಾವತಿ, ರಜನಿ, ಆದಿತ್ಯಗೌಡ ಹಾಗೂ ಹರೀಶ್ ಹಾಜರಿದ್ದರು.