ವೀರಾಜಪೇಟೆ, ಆ. 24: ವೀರಾಜಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ವತಿಯಿಂದ ಅತಿವೃಷ್ಟಿಗೆ ಒಳಗಾದ ಸಂತ್ರಸ್ತರಿಗೆ ನೆರವಾಗಲು ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿ ಕೊಡವ ಸಮಾಜದ ಅಧ್ಯಕ್ಷರಿಗೆ ನೀಡಲಾಗಿದೆ ಎಂದು ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಮನಿಯಪಂಡ ಕಾಂತಿ ಸತೀಶ್ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಕೂಟದ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.